News Karnataka Kannada
Wednesday, May 01 2024
ಮಂಗಳೂರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಸುಳ್ಯಕ್ಕೆ

BJP national president JP Nadda to visit Sullia today
Photo Credit : Facebook

ಸುಳ್ಯ:  ಇಂದು ಸಂಜೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸುಳ್ಯಕ್ಕೆ ಆಗಮಿಸಲಿದ್ದಾರೆ. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿ ಸಂಜೆ ೪.೩೦ಕ್ಕೆ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಇಂದು ಸಂಜೆ ೪ ಗಂಟೆಗೆ ಸುಳ್ಯಕ್ಕೆ ಹೆಲಿಕಾಪ್ಟರ್ ಮೂಲಕ ಜೆ.ಪಿ.ನಡ್ಡಾ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಜೆ.ಪಿ.ನಡ್ಡಾ ಅವರು ನೇರವಾಗಿ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಲಿದ್ದಾರೆ.

ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡಲಾಗಿದ್ದು ಗೃಹ ಪ್ರವೇಶ ನಡೆದಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಭೇಟಿ ನೀಡಲಿದ್ದಾರೆ. ಬಳಿಕ ನಡ್ಡಾ ಸುಳ್ಯದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ನಾಯಕರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ 8ರಿಂದ 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಎ.25 ರಂದು ಸುಳ್ಯಕ್ಕೆ ಕಾಂಗ್ರೆಸ್ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು