Categories: ಮಂಗಳೂರು

ಉಳ್ಳಾಲ: ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಅರಳಲಿದೆ – ಸತೀಶ್ ಕುಂಪಲ

ಉಳ್ಳಾಲ: ಕಾರ್ಯಕರ್ತರ ಉತ್ಸಾಹ , ಶ್ರಮಕ್ಕೆ ತಕ್ಕದಾಗಿ ಈ ಬಾರಿ ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಉತ್ಸವದಲ್ಲಿ ಮತದಾರರ ಪಾಲ್ಗೊಳ್ಳುವಿಕೆ ಹಾಗೂ ಜವಾಬ್ದಾರಿ ಪ್ರಮುಖವಾದದ್ದು, ಕಾರ್ಯಕರ್ತರ ಪರಿಶ್ರಮಕ್ಕೆ ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಬಹುಮತದಿಂದ ಆಯ್ಕೆಯಾಗುವ ಭರವಸೆಯಿದೆ ಎಂದು ಮಂಗಳೂರು (ಉಳ್ಳಾಲ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ.

ಕುಂಪಲ ಸರಕಾರಿ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ ೧೨೭ ರಲ್ಲಿ ಪತ್ನಿ ಮತ್ತು ಮಗಳ ಜತೆಗೆ ಆಗಮಿಸಿ ಮತಚಲಾವಣೆ ನಡೆಸಿದ ಬಳಿಕ ಮಾತನಾಡಿದರು.

ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದು ಪಂಚಾಯಿತಿ ಸದಸ್ಯನಾಗಿ, ಜಿ.ಪಂ ಉಪಾಧ್ಯಕ್ಷನಾಗಿ ಕ್ಷೇತ್ರದುದ್ದಕ್ಕೂ ಸಂಘಟನಾತ್ಮಕವಾಗಿ ದುಡಿದ ಅನುಭವವಿದೆ. ಎಲ್ಲರ ಆಶೀರ್ವಾದ ಹಾಗೂ ಕಾರ‍್ಯಕರ್ತರ ಬೆಂಬಲದ ಪರವಾಗಿ ಈ ಬಾರಿ ಮಂಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವೆ. ಸಾಮಾನ್ಯ ಕರ‍್ಯಕರ್ತನಿಗಾಗಿ ಕಾರ‍್ಯಕರ್ತರ ದುಡಿದ ಶ್ರಮಕ್ಕೆ ಎಂದಿಗೂ ಚಿರಋಣಿ. ಇಂದು ಮತದಾರರ ಮನವೊಲಿಸುವತ್ತ ಕಾರ‍್ಯಕರ್ತರು ಶ್ರಮಪಡುತ್ತಿರುವ ಕಾರ್ಯಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.

ಕ್ಷೇತ್ರ ಚುನಾವಣಾ ಉಸ್ತುವಾರಿ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಈ ಬಾರಿಯ ವಿಜಯೋತ್ಸವ ಬಿಜೆಪಿಯ ಪಾಲಿಗೆ ದೊರೆಯಬೇಕಿದೆ. ಸರಳ ಸಜ್ಜನಿಕೆಯ ಸತೀಶ್ ಕುಂಪಲ ಅವರನ್ನು ಹೈಕಮಾಂಡ್ ಆಯ್ಕೆಗೊಳಿಸಿದಂತೆ ಕ್ಷೇತ್ರ ಜನರೂ ಅವರ ಕೈಹಿಡಿಯಲಿದ್ದಾರೆ. ಕ್ಷೇತ್ರದುದ್ದಕ್ಕೂ ಸಂಚರಿಸಿ ಕಾರ‍್ಯಕರ್ತರ ಪ್ರೀತಿಗೆ ಪಾತ್ರರಾದ ಸತೀಶಣ್ಣ, ವಿಧಾನಸಭೆಗೆ ಪ್ರವೇಶಿಸುವಂತೆ ಆಯ್ಕೆಯಾಗಿ ಬರಲಿ ಎಂದು ಹಾರೈಸಿದರು.
ಮತದಾನ ನಡೆಸುವ ಮುನ್ನ ಸೋಮೇಶ್ವರದ ಸೋಮನಾಥೇಶ್ವರ ದೇವಸ್ಥಾನ ಮತ್ತು ಕುಂಪಲದ ಶ್ರೀ ಬಾಲಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಬಳಿಕ ಮತಚಲಾಯಿಸಿದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago