News Karnataka Kannada
Saturday, April 13 2024
Cricket
ಮಂಗಳೂರು

ಕರಾವಳಿಯಲ್ಲಿ ಬಿಜೆಪಿಗೆ ಕಟೀಲ್ ಬದಲು ಬೇರೆ ಅಭ್ಯರ್ಥಿ?

Mahesh
Photo Credit : News Kannada

ಮಂಗಳೂರು: ಕರಾವಳಿ ಭಾಗದ ಪ್ರಮುಖ ಲೋಕಸಭಾ ಕ್ಷೇತ್ರವಾದ ದಕ್ಷಿಣ ಕನ್ನಡದಲ್ಲಿ ಈ ಬಾರಿ ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.‌ ಕಮಲ ಪಕ್ಷದ ಈ ನಡೆ ಅಚ್ಚರಿ ಮೂಡಿಸಿದೆ. ಹೌದು. . .ರಾಷ್ಟ್ರೀಯತೆ ಹಾಗೂ ಸಾಮಾಜಿಕ, ಹಿಂದೂ ಪರ ಕೆಲಸ ಮಾಡುತ್ತಿರುವ ಮುಖಂಡರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಕಟೀಲ್‌ಗೆ ಟಿಕೆಟ್ ತಪ್ಪಿಸಲು ಸಾಧ್ಯವೇ ಎಂಬ ಪ್ರಶ್ನೆ ಸಹಜ. ಆದರೆ ಈಗ ನಡೆಯುತ್ತಿರುವ ಒಂದಷ್ಟು ಬೆಳೆವಣಿಗೆ ಅಚ್ಚರಿಗೆ ಕಾರಣವಾಗಿದೆ. ಪ್ರವೀಣ್ ನೆಟ್ಟಾರ ಹತ್ಯೆ ನಡೆದಾಗಲೇ ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಹಿಂದೂ ಕಾರ್ಯಕರ್ತರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದೂ, ಕಟೀಲ್ ರಾಜ್ಯಾಧ್ಯಕ್ಷರಾಗಿದ್ದರೂ ಹಿಂದೂ ಕಾರ್ಯಕರ್ತರ ರಕ್ಷಣೆಗೆ ಏನು ಮಾಡಲಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ತಪ್ಪಿದಾಗಲೂ ಕಟೀಲ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ನಳಿನ್ ಕುಮಾರ್ ಕಟೀಲ್‌ಗೆ ಟಿಕೆಟ್ ನೀಡದಿದ್ದರೆ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಪ್ರಶ್ನೆ. ಬ್ರಿಜೇಶ್ ಚೌಟ, ಮಹೇಶ್ ವಿಕ್ರಮ್ ಹೆಗ್ಡೆ ಹೆಸರುಗಳು ಮುಂಚೂಣಿಯಲ್ಲಿ ಕೇಳಿ ಬರುತ್ತಿವೆ. ವಿರೋಧವಿದ್ದರೂ ಬೆಂಗಳೂರು-ಮಂಗಳೂರು ರೈಲು ಕೊಯಿಕ್ಕೋಡ್‌ಗೆ ವಿಸ್ತರಣೆ ಸ್ಥಳೀಯ ಮಟ್ಟದಲ್ಲಿ ಹಿಂದೂ ಪರ ಕೆಲಸ ಮಾಡುತ್ತಿರುವ ಬ್ರಿಜೇಶ್ ಚೌಟ ಹಾಗೂ ಪತ್ರಕರ್ತ ಮಹೇಶ್ ವಿಕ್ರಮ್ ಹೆಗ್ಡೆ ಬಗ್ಗೆ ಯುವ ಹಿಂದೂ ಕಾರ್ಯಕರ್ತರು ಒಲವು ವ್ಯಕ್ತಪಡಿಸಿದ್ದಾರೆ.

ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರಿಯತೆ ಸಿದ್ಧಾಂತಕ್ಕಾಗಿ ಫೋಸ್ಟ್ ಕಾರ್ಡ್ ಆರಂಭಿಸಿದ್ದ ಮಹೇಶ್ ಹೆಗ್ಡೆ, ಸ್ವತಃ ಮೋದಿ ಟ್ವೀಟರ್‌ನಲ್ಲಿ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಫಾಲೋ ಮಾಡುವ ಹಂತಕ್ಕೆ ಹೆಸರು ಮಾಡಿದ್ದರು. ವಿಶೇಷವಾಗಿ ಹಿಂದೂ ಕಾರ್ಯಕರ್ತರ ಹತ್ಯೆಗಳಾದಾಗ ಸಾಮಾಜಿಕ ಜಾಲ ತಾಣಗಳಲ್ಲಿ ಅಭಿಯಾನಗಳನ್ನ ನಡೆಸಿ ಅವರ ಕುಟುಂಬಗಳಿಗೆ ಹಣಕಾಸಿನ ನೆರವು ಒದಗಿಸಿಕೊಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈಗ ಹಿಂದೂ ಕಾರ್ಯಕರ್ತರು ಅವರ ಹೆಸರನ್ನು ದ. ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಚಾಲ್ತಿಗೆ ತಂದಿದ್ದಾರೆ. ಹೀಗಾಗಿ ನಳೀನ್‌ ಕುಮಾರ್‌ ಗೆ ಈ ಬಾಋಇ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಎದ್ದು ಕಾಣುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು