Categories: ಮಂಗಳೂರು

ಮಿಲಾಗ್ರಿಸ್ ಕಾಲೇಜ್ ನಲ್ಲಿ ಗ್ರಂಥಪಾಲಕರ ದಿನ ಆಚರಣೆ ಹಾಗೂ ಪುಸ್ತಕ ಪ್ರದರ್ಶನ

ಮಂಗಳೂರು: ಇಂದು(ಮಾ.20) ಮಿಲಾಗ್ರಿಸ್ ಕಾಲೇಜಿನ ಗ್ರಂಥಾಲಯವು ‘ಗ್ರಂಥಪಾಲಕರ ದಿನ ಆಚರಣೆ ಹಾಗೂ ಒಂದು ದಿನದ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಮಿಲಾಗ್ರಿಸ್ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕು ಶ್ರಾವ್ಯ ಎನ್ ಇವರು ದೀಪ ಬೆಳಗಿಸುವ ಮೂಲಕ ಹಾಗೂ ಗ್ರಂಥಾಲಯದ ಪಿತಾಮಹ ಡಾ| ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರಂಥಾಲಯವು ಶಿಕ್ಷಣಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, ಇದು ಶಿಕ್ಷಣದ ಸಾಧಕ ಹಾಗೂ ಬಾಧಕಗಳನ್ನು ಎತ್ತಿತೋರಿಸುತ್ತದೆ. ಗ್ರಂಥಾಲಯದಲ್ಲಿ ಪುಸ್ತಕಗಳು ಓದುಗರಿಗೆ ಸ್ವವಿಮರ್ಶೆ ಜ್ಞಾನದ ಒಳಹರಿವಿಗೆ ಪ್ರೇರಣೆ ಹಾಗೂ ದಾರಿದೀಪವಾಗಬಲ್ಲದು “ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ ಮೈಕಲ್ ಸಾಂತುಮಾಯರ್ ಮಾತನಾಡಿ, ವಿದ್ಯಾರ್ಥಿಗಳು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಭವಿಷ್ಯದ ಸರ್ವತೋಮುಖ ಬೆಳವಣಿಗೆಯನ್ನು ಕಂಡುಕೊಳ್ಳಲಿ ಎಂದು ಹೇಳಿದರು.

ಐಕ್ಯೂಎಸಿ ಸಂಯೋಜಕಿ ಶ್ರೀಮತಿ ಚೇತನಾ ಕೆ, ಗ್ರಂಥಪಾಲಕಿ ಪ್ರಮೀಳಾ ಡಿಸೋಜಾ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಲೀಶಾ ಉಪಸ್ಥಿತರಿದ್ದರು. ವಿದ್ಯಾರ್ಥಿ ರೊಯ್ ಸ್ಟನ್ ಸ್ವಾಗತಿಸಿ, ನಿರೂಪಿಸಿದರು. ಮರ್ವಿನ್ ಪಿಂಟೋ ವಂದಿಸಿದರು. ಕಾರ್ಯಕ್ರಮದ ಉದ್ಘಾಟನೆಯ ನಂತರ ವಿದ್ಯಾರ್ಥಿಗಳು ಅಲ್ಲಲ್ಲಿ ಪ್ರದರ್ಶಿಸಿದ ಪುಸ್ತಕಗಳನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ 146 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Nisarga K

Recent Posts

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

11 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

21 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

28 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

41 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

43 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

55 mins ago