Categories: ಮಂಗಳೂರು

ಗುರುಪುರ ಬಳಿ ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಬಸ್

ಮಂಗಳೂರು:  ಗುರುಪುರ ಬಳಿ ಬ್ರೇಕ್ ಫೇಲ್ ಆಗಿ ಬಸ್ ವೊಂದು ಪಲ್ಟಿಯಾದ ಘಟನೆ ಇಂದು ಸಂಜೆ (ಜ.02) ನಡೆದಿದೆ. ಬಿ.ಸಿ.ರೋಡ್ ಮತ್ತು ಕಿನ್ನಿಗೋಳಿ ನಡುವೆ ತೆರಳುತ್ತಿದ್ದ ವೇಳೆ ಬಸ್ ಬ್ರೇಕ್ ಫೇಲ್ ಆದ ಕಾರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಉರುಳಿದೆ. ಪರಿಣಾಮ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಾಗಳಾಗಿದ್ದು, ಅವರನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಮಂದಿಗೆ ಗಾಯಗಳು ಆಗಿವೆ. ನವದುರ್ಗಾ ಹೆಸರಿನ ಖಾಸಗಿ ಬಸ್ ಅಪಘಾತಕ್ಕಿಡಾದ ಬಸ್ಸು ಬಸ್ಸು ಕೈಕಂಬದಿಂದ ಪೊಳಲಿ ಮಾರ್ಗವಾಗಿ ಬಿ ಸಿ ರೋಡ್ ಕಡೆಗೆ ತೆರಳುತ್ತಿತ್ತು. ಆದರೇ ಬಸ್ಸು ಕೈಕಂಬ ಪೊಳಲಿ ದ್ವಾರದ ಬಳಿ ಬರುತ್ತಲೇ ಚಾಲಕನ ಹತೋಟಿ ಕಳಕೊಂಡು ಪಲ್ಟಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Ashitha S

Recent Posts

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

11 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

42 mins ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

1 hour ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗುಜರಾತ್​​​​ ಟೈಟನ್ಸ್ ಗೆ 35 ರನ್‌ಗಳ ಜಯ

ಅಹ್ಮದಾಬಾದಿನ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ವಿರುದ್ಧ ಗುಜರಾತ್​​​​ ಟೈಟನ್ಸ್​…

2 hours ago