ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ನವೆಂಬರ್ ಒಂದರ ಕನ್ನಡ ರಾಜ್ಯೋತ್ಸವದಂದು ನಗರದ ಜೆ ಬಿಜೈನಲ್ಲಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡದ ತೇರು ಹೆಸರಿನ 3ಬಸ್ ಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.
ರಿಬ್ಬನ್ ಕತೇರಿಸುವ ಮೂಲಕ ಹಸಿರು ನಿಶಾನೆ ಮತ್ತು ಕನ್ನಡ ಧ್ವಜ ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾಕ್ಟರ್ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಧಾನಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ ವಿ ತೀರ್ಥರಾಮ, ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರ ಜನಪ್ರತಿನಿಧಿಗಳು ಸಾರಿಗೆ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.