Categories: ಮಂಗಳೂರು

ಸೊಂಟಕ್ಕೆ ಬಲೂನು ಕಟ್ಟಿಕೊಂಡು ನದಿಗೆ ಜಿಗಿದು ಉದ್ಯಮಿ ಆತ್ಮಹತ್ಯೆ

ಕಡಬ: ಉದ್ಯಮಿಯೊಬ್ಬರು ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆ ಮೇಲಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ಇಂದು ನಸುಕಿನ ಹೊತ್ತು ಕಡಬ ತಾಲೂಕಿನ ಶರವೂರು ಸಮೀಪ ಶಾಂತಿಮೊಗರು ಎಂಬಲ್ಲಿ ಸಂಭವಿಸಿದೆ.

ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್‌ ಎಂಬ ಅಂಗಡಿ ಹೊಂದಿರುವ ಸಾಮಾಜಿಕ, ಧಾರ್ಮಿಕ ಮುಂದಾಳು ಚಂದ್ರಶೇಖರ ಪೂಜಾರಿ (70) ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ 4 ಗಂಟೆ ವೇಳೆಗೆ ಕಾರನ್ನು ಸೇತುವೆ ಮೇಲೆ ನಿಲ್ಲಿಸಿ ಸೊಂಟಕ್ಕೆ ಹಗ್ಗದಿಂದ ಬಲೂನು ಕಟ್ಟಿಕೊಂಡು ನದಿಗೆ ಜಿಗಿದಿದ್ದಾರೆ. ಶವ ಹುಡುಕಲು ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಸೊಂಟಕ್ಕೆ ಬಲೂನು ಕಟ್ಟಿಕೊಂಡಿದ್ದರು ಎನ್ನಲಾಗಿದೆ. ರಾತ್ರಿ ಭಜನೆ ಮಾಡಿ ಮೊಮ್ಮಕ್ಕಳೊಂದಿಗೆ ಬಲೂನ್‌ನಲ್ಲಿ ಆಟವಾಡುತ್ತಿದ್ದರು. ಅದೇ ಬಲೂನ್ ಕಟ್ಟಿ ನದಿಗೆ ಹಾರಿದ್ದಾರೆ. ಶಾಂತಿಮೊಗರಿನ ಪೂವಪ್ಪ ಗೌಡ ಎಂಬವರು ನದಿಯಿಂದ ಶವ ಮೇಲೆತ್ತಿದ್ದಾರೆ. ಬಲೂನು ಇದ್ದ ಕಾರಣ ಶವ ಹುಡುಕಲು ಸಮಸ್ಯೆಯಾಗಿಲ್ಲ.

ಪತ್ನಿ, ಇಬ್ಬರು ಪುತ್ರರಿದ್ದು, ಇಬ್ಬರಿಗೂ ಮದುವೆಯಾಗಿದೆ. ಸಂತೃಪ್ತ ಕುಟುಂಬ, ವ್ಯಾಪಾರ ವಹಿವಾಟು ಕೂಡ ಚೆನ್ನಾಗಿತ್ತು. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದು, ಹೀಗಿದ್ದರೂ ಆತ್ಮಹತ್ಯೆ ಮಾಡಿಕೊಂಡಿರುವುದು ಪರಿಸರದಲ್ಲಿ ಆಶ್ಚರ್ಯವುಂಟು ಮಾಡಿದೆ. ಕಾರಿನಲ್ಲಿ ಅವರು ಬರೆದಿಟ್ಟ ಪತ್ರವೊಂದು ಸಿಕ್ಕಿದೆ. ಅದರಲ್ಲಿ ಕಾರು ಕೀ ಸೇತುವೆ ಮೇಲಿದೆ ಎಂದು ಬರೆದಿಟ್ಟಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಶವ ಮಹಜರು ಮಾಡಿದರು.

ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಚಂದ್ರಶೇಖರ ಪೂಜಾರಿ ಯಕ್ಷಗಾನ ಅರ್ಥಧಾರಿ ಮತ್ತು ಸಂಘಟಕರೂ ಆಗಿದ್ದರು. ಆಲಂಕಾರು ಮೂರ್ತೆದಾರರ ಸಹಕಾರಿ ಸಂಘ ಮೂರು ಅವಧಿಗೆ ಅಧ್ಯಕ್ಷರಾಗಿದ್ದರು. ಶರವೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದರು.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

10 mins ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

26 mins ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

53 mins ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

1 hour ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

2 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago