Categories: ಮಂಗಳೂರು

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು‌

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ.

ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮನೆಯಿಂದ ಕಳವು ನಡೆದಿದ್ದು, 112000 ಮೌಲ್ಯದ 4 ಪವನ್ ತೂಕದ ಚಿನ್ನದ ನೆಕ್ಲಸ್, ಹಾಗೂ 11000 ಸಾವಿರ ರೂ ನಗದು ಒಟ್ಟು 1,23,000 ರೂ ಮೌಲ್ಯ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ.

ಅಬ್ದುಲ್ ಹಮೀದ್ ಅವರು ಅಗಸ್ಟ್ 26 ರಂದು ರಾತ್ರಿ 9.30 ರ ಬಳಿಕ ಮನೆಗೆ ಬೀಗ ಹಾಕಿ ಅತ್ತೆ ಮನೆಗೆ ಹೋಗಿದ್ದರು. ಇಂದು ಬೆಳಿಗ್ಗೆ ಮನೆಗೆ ಬಂದು ‌ನೋಡಿದಾಗ ಹಿಂಬದಿಯ ಬಾಗಿಲು ತೆರೆದಿತ್ತು. ಸಂಶಯದಿಂದ ಮನೆಯೊಳಗೆ ಹೋಗಿ ನೋಡಿದಾಗ ಬೆಡ್ ರೂಮಿನಲ್ಲಿ ಇದ್ದ ಗೊಡ್ರೇಜ್ ನಲ್ಲಿ ಇರಿಸಲಾಗಿದ್ದ ನಗನಗದು ಕಳವು ವಾಗಿರುವುದು ಗಮನಕ್ಕೆ ಬಂದಿದೆ.

ಸ್ಥಳಕ್ಕೆ ಬಂಟ್ವಾಳ ಅಪರಾಧ ವಿಭಾಗದ ಎಸ್. ಐ.ಮೂರ್ತಿ, ಶ್ವಾನದಳ, ಬೆರಳಚ್ಚು ತಜ್ಞರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.

Gayathri SG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

6 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago