News Karnataka Kannada
Monday, April 29 2024
ಮಂಗಳೂರು

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಹೊಂದಿದ್ದ ನಾಲ್ವರು ಆರೋಪಿಗಳ ಸೆರೆ

Crime
Photo Credit : News Kannada

ಮಂಗಳೂರು: ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂಎ ಖರೀದಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವ ಸಲುವಾಗಿ ನಗರಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಜಾಲವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಕಾರ್ಯಾಚರಣೆ ನಡೆಸಿ 4ಮಂದಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಮ್ಮದ್ ರಮೀಜ್ ಮತ್ತು ಅಬ್ದುಲ್ ರವೂಫ್ ಶಿರಿಯಾದ ಮೊಯ್ದಿನ್ ರಶೀದ್ ಮತ್ತು ಬೆಂಗಳೂರಿನ ಮಡಿವಾಳದ ಸಬಿತಾ ಯಾನೆ ಸಮೀರಾ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 125 ಗ್ರಾಂ ತೂಕದ 6ಲಕ್ಷ ರೂ ಮೌಲ್ಯದ ಎಂಡಿಎಂಎ ಮಾದಕ ವಸ್ತು 6 ಮೊಬೈಲ್ ಫೋನ್ ಗಳು ಡಿಜಿಟಲ್ ತೂಕ ಮಾಪನ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ರಿಟ್ಸ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ 982000 ಲಕ್ಷ ರೂ ಎಂದು ಅಂದಾಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು