News Karnataka Kannada
Wednesday, April 17 2024
Cricket
ಮಂಗಳೂರು

ಚಾರ್ಮಾಡಿ ಘಾಟಿ: ಕೆಎಸ್ಆರ್ ಟಿಸಿ ಬಸ್ ಗಳು ಮುಖಾಮುಖಿ ಡಿಕ್ಕಿ, ಚಾಲಕನಿಗೆ ಗಾಯ

Charmadi Ghat: KSRTC buses collide head-on, driver injured
Photo Credit : News Kannada

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಬಿದಿರುತಳ ಸಮೀಪದ ಕೂಗಳತೆಯ ದೂರದಲ್ಲಿ ಎರಡು ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಚಾಲಕನ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಸಾಗುತ್ತಿದ್ದ ಬಸ್ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಗಳು ಇಕ್ಕಟ್ಟಾದ ರಸ್ತೆಯಲ್ಲಿ ಶುಕ್ರವಾರ ಸಂಜೆ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಬಸ್ ನ ಚಾಲಕ ತೀವ್ರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಗಳ ನಡುವಿನ ಡಿಕ್ಕಿಯಿಂದ ಘಾಟಿಯ ಎರಡು ಭಾಗಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಲವು ಪ್ರಯಾಣಿಕರು 10 ಕಿ.ಮೀ ನಡೆದು ಕೊಟ್ಟಿಗೆಹಾರ ಸೇರಿದರು‌ ಎನ್ನಲಾಗಿದೆ.

ಸ್ಥಳಕ್ಕೆ ಬಣಕಲ್ ಸಬ್ ಇನ್ ಸ್ಪೆಕ್ಟರ್ ಜಂಬೂರಾಜ್ ಮಹಾಜನ್, ಹೈವೇ ಪ್ಯಾಟ್ರೋಲ್ ನ ಸಬ್ ಇನ್ ಸ್ಪೆಕ್ಟರ್ ಹೇಮಾ,ಎಎಸ್ ಐ ಟಿ.ಕೆ.ಶಶಿ, ಪೊಲೀಸ್ ಸಿಬ್ಬಂದಿಗಳು ಹಾಗೂ ಸಮಾಜ ಸೇವಕ ಮೊಹಮ್ಮದ್ ಆರೀಫ್ ಹಾಗೂ ಸ್ಥಳೀಯರು ಭೇಟಿ ನೀಡಿ ರಸ್ತೆಯಿಂದ ಬಸ್ ಗಳನ್ನು ತೆರವುಗೊಳಿಸಲು ಸಹಕರಿಸಿದರು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ದಟ್ಟವಾದ ಮಂಜು ಕವಿದ ವಾತಾವರಣ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು