Categories: ಮಂಗಳೂರು

ಮಕ್ಕಳಿಗೆ ನಮ್ಮ ಸಂಸ್ಕ್ರತಿಯ ತಿಳುವಳಿಕೆ ಅಗತ್ಯ- ಉಮಾನಾಥ ಕೋಟ್ಯಾನ್

ಕಟೀಲು: ಆಟಿ ಅಂದಿನ ಕಷ್ಠದ ದಿನಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಯಪಡಿಸುವುದು ಅಭಿನಂದನೀಯ ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶಿಕ್ಷಣ ಸಂಸ್ಥೆಯ ಶ್ರೀ ವಿದ್ಯಾ ಚಾವಡಿಯಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ನಮ್ಮ ಸಂಸ್ಕ್ರತಿಯ ತಿಳುವಳಿಕೆ ಅಗತ್ಯ ಆ ಕೆಲಸವನ್ನು ಹಿರಿಯರಾದ ನಾವು ಮಾಡಬೇಕು, ಇಂದಿನ ಯುವ ಜನತೆ ತಮ್ಮ ಹೆತ್ತವರನ್ನು ಅಶ್ರಮದಲ್ಲಿ ಬಿಡುತ್ತಾರೆ ಇದು ತಪ್ಪು ಆ ಕೆಲಸವನ್ನು ನಾವು ಮಾಡಬಾರದು, ನಮ್ಮ ಹಿರಿಯರು ಅವಿದ್ಯವಂತರಲ್ಲ ಯಾಕಂದರೆ ಹಿಂದಿನ  ಹಲವು ಆಚರಣೆಗಳಿಗೆ ವೈಜ್ಞಾನಿಕ ಕಾರಣಗಳನ್ನು ಕೊಡಬಹುದಾಗಿದೆ. ನಮ್ಮ ಹಿರಿಯರ ಪರಿಶ್ರಮದಿಂದ ನಮಗೆ ಇಂದು ಸ್ಥಾನ ಮಾನ ಸಿಕ್ಕಿದೆ ಎಂದರು.

ಈ ಸಂದರ್ಭ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಾಲೆಯ ೧೦೦ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ದೇವಳದ ಅಸ್ರಣ್ಣ ಬಂಧುಗಳನ್ನು, ಆಡಳಿತ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು ಅವರನ್ನು  ಶಿಕ್ಷಕ ಸಾಯಿನಾಥ ಶೆಟ್ಟಿ ಅವರು ಗೌರವಿಸಿದರು. ನಿವೃತ್ತಿಗೊಳ್ಳಲಿರುವ ಶಿಕ್ಷಕ ಸಾಯಿನಾಥ ಶೆಟ್ಟಿ ಮತ್ತು ಸೋಮಪ್ಪ ಅಲಂಗಾರ್ ಅವರನ್ನು ಗೌರವಿಸಲಾಯಿತು. ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ಆಶೀರ್ವಾಚನಗೈದರು ಈ ಸಂದರ್ಭ ಅನಂತಪದ್ಮನಾಭ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಪ್ರದ್ಯುಮ್ನ ರಾವ್ ಶಿಬರೂರು, ಸಂತೋಷ್ ಕುಮಾರ್ ಹೆಗ್ಡೆ ಎಳತ್ತೂರು, ಕೆ.ಎಂ.ಶೆಟ್ಟಿ ಮಧ್ಯಗುತ್ತು, ರತ್ನಾಕರ ಶೆಟ್ಟಿ ಮುಂಡ್ಕೂರು, ನವೀನ್ ಡಿ ಪಡೀಲ್, ಬಿಪಿನಿ ಚಂದ್ರ ಶೆಟ್ಟಿ ಕೊಡೆತ್ತೂರುಗುತ್ತು, ದೇವಳದ ವಿಶೇಷ ಅಧಿಕಾರಿ ಮೋಹನ್ ರಾವ್, ತ್ಯಾಗರಾಜ ಆಚಾರ್ಯ, ಲೋಕಯ್ಯ ಸಾಲಿಯಾನ್ ಕೊಂಡೆಲಾ ಮತ್ತಿತರರು ಉಪಸ್ಥಿತರಿದ್ದರು. ಸೋಮಪ್ಪ ಅಲಂಗಾರ್ ಪ್ರಸ್ತಾವನೆಗೈದರು, ವಾದಿರಾಜ ಪಟ್ಟಿ ಸನ್ಮಾನಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಸಾಯಿನಾಥ ಶೆಟ್ಟಿ ಸ್ವಾಗತಿಸಿ, ಶಿಕ್ಷಕಿ ರೋಹಿಣಿ ಶೆಟ್ಟಿ ಮತ್ತು  ಪ್ರದೀಪ್ ನಿರೂಪಿಸಿದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago