Categories: ಮಂಗಳೂರು

ಬೆಳ್ತಂಗಡಿ: ‘ಮಾದಕ ದ್ರವ್ಯ ಮುಕ್ತ ಕ್ಲಬ್’ ರಚನೆ ಮಾಡುವಂತೆ ಶಿಕ್ಷಣ ಇಲಾಖೆಗಳಿಗೆ ಸುತ್ತೋಲೆ

ಬೆಳ್ತಂಗಡಿ: ಒಬ್ಬ ವಿದ್ಯಾರ್ಥಿಯ ಭವಿಷ್ಯದ ಜೀವನಕ್ಕೆ ಶಿಕ್ಷಣ ಎಷ್ಟು ಮುಖ್ಯವೋ, ಆತನ ಉತ್ತಮ ನಡವಳಿಕೆ, ಒಳ್ಳೆಯ ಮಾತುಗಾರಿಕೆ, ದುಶ್ಚಟಮುಕ್ತ ಜೀವನ ಅಷ್ಟೇ ಮುಖ್ಯವಾಗಿರುತ್ತದೆ.

ತಂದೆ ತಾಯಿ ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಉತ್ತಮ ಶಾಲೆಗಳಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕೊಡಿಸುತ್ತಾರೆ. ಮಕ್ಕಳು ಯಾವುದೇ ದುರಭ್ಯಾಸಕ್ಕೆ ಬಲಿಯಾಗದೆ ತಂದೆ ತಾಯಿಯ ಕನಸನ್ನು ಜಬಾಬ್ದಾರಿಯಿಂದ ಈಡೇರಿಸಲು ಪ್ರಯತ್ನಿಸಬೇಕು.

ಈ ನಿಟ್ಟಿನಲ್ಲಿ ಇಂದು ಸರಕಾರವೇ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಮಾದಕ ದ್ರವ್ಯದಿಂದ ಆಗುವ ದುಷ್ಪರಿಣಾಮಗಳ ಅರಿವು ಮೂಡಿಸಲು ‘ಮಾದಕ ದ್ರವ್ಯ ಮುಕ್ತ ಕ್ಲಬ್’ ಹಾಗೂ ಸಮಿತಿ ರಚನೆ ಮಾಡುವಂತೆ ಮಾನ್ಯ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರವು ಶಿಕ್ಷಣ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಸರಕಾರ ತೆಗೆದುಕೊಂಡ ನಿರ್ಧಾರ ಸ್ವಾಗತಾರ್ಹ ಎಂದು ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಆದುದರಿಂದ ವಿದ್ಯಾರ್ಥಿಗಳನ್ನು ಮತ್ತು ಯುವಜನತೆಯನ್ನು ದುಶ್ಚಟಗಳಿಂದ ಪಾರುಮಾಡಿ ‘ದುಶ್ಚಟಮುಕ್ತ ಸಮಾಜ – ಆರೋಗ್ಯವಂತ ಭಾರತ’ ವನ್ನು ರಚಿಸೋಣ ಎಂದು ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ರಾಜಣ್ಣ ಮೂ. ಕೊರವಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಹೆಚ್.ಮಂಜುನಾಥ್, ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ. ಪಾೈಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

1 hour ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago