News Karnataka Kannada
Sunday, May 12 2024
ಮಂಗಳೂರು

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಬಟ್ಟೆ ಮಳಿಗೆ ಮಾಲೀಕನಿಗೆ 11 ವರ್ಷ ಜೈಲು ಶಿಕ್ಷೆ

Accused
Photo Credit : News Kannada

ಮಂಗಳೂರು: ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಮಾಲೀಕನಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ಫೋಕ್ಸೊ ನ್ಯಾಯಾಲಯ 11 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ಬಜ್ಪೆಯ ಕಂದಾವರ ನಿವಾಸಿ ಅಬ್ದುಲ್ ಲತೀಫ್(41) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಈತನು ಬಜ್ಪೆಯ ಕೈಕಂಬದಲ್ಲಿ ಫಾತಿಮಾ ಡ್ರೆಸ್ ಕಲೆಕ್ಷನ್ ಎಂಬ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದ. 2017ರಲ್ಲಿ ಈತ ತನ್ನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಗೆ ಅಮಲು ಪದಾರ್ಥ ಮಿಶ್ರಿತ ಜ್ಯೂಸ್ ನೀಡಿ ಅತ್ಯಾಚಾರ ಎಸಗಿದ್ದನು. ಅಲ್ಲದೇ ಯಾರಲ್ಲಾದರೂ ಈ ವಿಚಾರವನ್ನು ತಿಳಿಸಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದನು.

ಈ ವಿಚಾರವನ್ನು ಬಾಲಕಿ ಮನೆಯವರಲ್ಲಿ ತಿಳಿಸಿದ್ದು, ಬಳಿಕ ಬಜ್ಪೆ ಠಾಣೆಗೆ ಪಾಲಕರೊಂದಿಗೆ ಆಗಮಿಸಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯು ಪೊಲೀಸರ ಕೈಗೆ ಸಿಗದೇ ಸುಮಾರು ಎರಡು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಆದರೆ ಆ ಬಳಿಕ ಪೊಲೀಸರು ಆರೋಪಿಯನ್ನು ಗದಗ ಜಿಲ್ಲೆಯಲ್ಲಿ ಬಂಧಿಸಿದ್ದರು.

ಈ ಪ್ರಕರಣದ ತನಿಖೆ ನಡೆಸಿದ ಬಜ್ಪೆ ಠಾಣೆಯ ಅಂದಿನ ಪೊಲೀಸ್ ಇನ್​​ಸ್ಪೆಕ್ಟರ್ ಕೆ.ಆರ್. ನಾಯ್ಕ್ ಅವರು ನ್ಯಾಯಾಲಯಕ್ಕೆ ದೋಪಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಧಕೃಷ್ಣ ಅವರು ವಾದವನ್ನು ಆಲಿಸಿ ಆರೋಪಿ ಅಬ್ದುಲ್ ಲತೀಫ್ ತಪ್ಪಿತಸ್ಥನೆಂದು ಘೋಷಿಸಿ, 11 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು