ಸುಬ್ರಹ್ಮಣ್ಯ: ಸಿಎಂ ಬಸವರಾಜ್ ಬೊಮ್ಮಾಯಿ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಯಾತ್ರೆ ಕೈಗೊಂಡಿದ್ದು ಇದೀಗ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ದೇವಸ್ಥಾನ ವತಿಯಿಂದ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಮೋಹನ್ ರಾಮ್ ಸುಳ್ಳಿ ಅವರನ್ನು ಶಾಲು ಹೊದೆಸಿ ಸ್ವಾಗತಿಸಿದರು. ಬಿಜೆಪಿ ಪಕ್ಷದ ವತಿಯಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರನ್ನು ಸ್ವಾಗತಿಸಿದರು.
ಈ ವೇಳೆ ಬಿಜೆಪಿ ಮಂಡಲ ಅದ್ಯಕ್ಷ ಹರೀಶ್ ಕಂಜಿಪಿಲಿ, ಮೀನುಗಾರಿಕಾ ನಿಗಮ ಅದ್ಯಕ್ಷ ಎ. ವಿ ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅದ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಸಮಿತಿ ಪ್ರ .ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ವೆಂಕಟ್ ದಂಬೆಕೋಡಿ ಮೊದಲಾದವರಿದ್ದರು.