ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಆ.1ರ ಇಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉಡುಪಿಗೆ ಆಗಮಿಸಲಿದ್ದಾರೆ.
ಉಡುಪಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 12.30ರಿಂದ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಇದರ ಜೊತೆ ಉಡುಪಿ ಕಾಲೇಜು ವಿಡಿಯೋ ಪ್ರಕರಣದ ವಿವಾದದ ಕುರಿತು ಹಾಗೂ ಮಂಗಳೂರಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದ ಹಿನ್ನೆಲೆ ಖುದ್ದು ಸಿಎಂ ಅವರು ತೆರಳಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ಹೊರಟು ಸಂಜೆ 5.15ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ರಾತ್ರಿ 9ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.