ಬಂಟ್ವಾಳ: ಬೈಕ್ ಗೆ ಲಾರಿ ಡಿಕ್ಕಿಯಾಗಿ ಸಹಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.
ಮೃತಪಟ್ಟವರು ಬೆಂಗ್ರೆ ನಿವಾಸಿ ರಮೀಜ್ (20) ಎಂದು ತಿಳಿದು ಬಂದಿದೆ.
ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದು, ಆತನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದ. ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ. ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸದ ಕಾರ್ಯಕ್ರಮಕ್ಕೆ ತೆರಳುವವರು ಎಂದು ತಿಳಿದಿದೆ. ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.