News Karnataka Kannada
Thursday, May 02 2024
ಮಂಗಳೂರು

ಬೆಳ್ತಂಗಡಿ: ಏ.17ರಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ

Congress candidate Rakshit Shivram to file his nomination on April 17
Photo Credit : News Kannada

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪ್ರಮುಖರಾದ ನಾರಾಯಣ ಗೌಡ ದೇವಸ್ಯ, ರಜತ್ ಗೌಡ , ಮಾಚಾರು ನಾಗೇಶ್ ಕುಮಾರ್ ಧನಂಜಯ ರಾವ್, ಸಂತೋಷ್ ಗೌಡ ವಳಂಬ್ರ, ಹರೀಶ್ ಗೌಡ, ಪ್ರವೀಣ್ ವಿ.ಜಿ ಬಂದಾರು, ಪ್ರವೀಣ್ ಗೌಡ ಕೊಯ್ಯೂರು, ಚಂದ್ರಶೇಖರ್ ಗೌಡ ಮಲವಂತಿಗೆ, ನವೀನ್ ಗೌಡ ಸವಣಾಲು, ತನುಷ್ ಶೆಟ್ಟಿ ಉಜಿರೆ ಮೊದಲಾದವರು ಉಪಸ್ಥಿತರಿದ್ದರು.

ಏ.17ರಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಅವರು ಏ.17 ರಂದು ಬೆಳಿಗ್ಗೆ 1೦ ಗಂಟೆಗೆ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಮನೆ ಬಳಿ ಸಭೆ ಸೇರಿ ಬಳಿಕ ಬೆಳ್ತಂಗಡಿ ಮಿನಿ ವಿಧಾನ ಸೌಧವರೆಗೆ ಅಭಿಮಾನಿಗಳೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಪಕ್ಷದ ಕಾರ್ಯಕರ್ತರು ಹಾಗು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ರಂಜನ್ ಜಿ.ಗೌಡ ಮತ್ತು ಬೆಳ್ತಂಗಡಿ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು