News Karnataka Kannada
Saturday, May 11 2024
ಮಂಗಳೂರು

ಸರ್ಕಾರ ನೆಟ್ಟಾರ್‌ ಪತ್ನಿ ಕೆಲಸ ಕಸಿದಿದೆ, ನಾವು ಎನ್‌ಎಂಪಿಟಿಯಲ್ಲಿ ಉದ್ಯೋಗ ಕೊಡ್ತೀವಿ: ನಳಿನ್‌

Kalladka flyover to be completed by December: Disha committee
Photo Credit : News Kannada

ಮಂಗಳೂರು: ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್‌ ಕಟೀಲ್‌ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿದರು.

ಇದರಿಂದಾಗಿ ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ. ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಹಾಕಲಾಗಿದೆ.

ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿ ಯನ್ನು ಕಟ್ಟಿಹಾಕುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ನಲ್ಲಿ ತಾಕತ್ ಇದ್ರೆ ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಿ ಎಂದು ನಳಿನ್‌ ಸವಾಲಯ ಹಾಕಿದರು. ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಆದರೆ ನೀವು ಉದ್ಯೋಗ ನೀಡದಿದ್ದರೂ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡಿದರು.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ಎಂದು ಹೇಳಿದರು. ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ಅನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲದಿರುವ ಬಗ್ಗೆ ದುಃಖವಿದೆ ಎಂದು ನಳಿನ್‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು