Categories: ಮಂಗಳೂರು

ಕಾಂಗ್ರೆಸ್ ಸರಕಾರದಿಂದ ಜನರಿಗೆ ತೊಂದರೆ: ಶಾಸಕ ಡಿ.ವೇದವ್ಯಾಸ ಕಾಮತ್

ಮಂಗಳೂರು: ಮಂಗಳೂರಿನಲ್ಲಿ ಸಂಪ್ರದಾಯಿಕ ಮರಳುಗಾರಿಕೆ ನಿಲ್ಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ 7 ಮಂದಿ ತಜ್ಞರ ವರದಿಯನ್ನು ತಯಾರಿಸಿ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ಮರಳು ನೀತಿಯನ್ನು ಜಾರಿ ಮಾಡುವುದಾಗಿ ಹೇಳಿದ್ದರೂ ಇಲ್ಲಿಯವರೆಗೆ ಆ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಮರಳುಗಾರಿಕೆಯನ್ನೇ ನಂಬಿರುವ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ಮರಳನ್ನು ಬ್ಲ್ಯಾಕ್ ಮಾರ್ಕೆಟ್ ನಲ್ಲಿ ದುಪ್ಪಟ್ಟು ಹಣ ಕೊಟ್ಟು ಖರೀದಿ ಮಾಡುವ ಪರಿಸ್ಥಿತಿ ಒದಗಿದೆ” ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕದ್ರಿಪಾರ್ಕ್ ಹೊರಗಡೆ ಇರುವ ಅಂಗಡಿ ಮಳಿಗೆಗಳನ್ನು ಇನ್ನೂ ತೆರೆಯಲಾಗಿಲ್ಲ. ಇದಕ್ಕಾಗಿ ಟೆಂಡರ್ ಕರೆದಿಲ್ಲ. ನಾವು ಸ್ಮಾರ್ಟ್ ಸಿಟಿಯಲ್ಲಿ ನಿರ್ಮಾಣ ಮಾಡಿರುವ ಪಾರ್ಕ್ ನಲ್ಲಿ ಎರಡು ತಿಂಗಳು ಕಳೆದರೂ ಅಂಗಡಿ ಮಳಿಗೆಗಳಿಗೆ ಯಾಕೆ ಟೆಂಡರ್ ಕರೆದಿಲ್ಲ? ಇಲ್ಲಿ ಕಾಂಗ್ರೆಸಿಗರು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತ, ಹಿತೈಷಿಗಳಿಗೆ ಈ ಅಂಗಡಿಗಳನ್ನು ನೀಡಲು ಕಾಂಗ್ರೆಸ್ ಮುಖಂಡರು ಮುಂದಾಗಿದ್ದು ಅದಕ್ಕಾಗಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ” ಎಂದು ಕಾಮತ್ ಕಿಡಿಕಾರಿದರು.

“ಅಲ್ಪಸಂಖ್ಯಾತರಿಂದಲೇ ಆರಿಸಿ ಬಂದಿರುವ ಸರಕಾರ ಇಂದು ಅಲ್ಪಸಂಖ್ಯಾತರಿಗೆ ಅನ್ಯಾಯ ಎಸಗುತ್ತಿದೆ. ದಲಿತರಿಗೆ, ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡಿರುವ ಸರಕಾರ ಏನಾದ್ರು ಇದ್ರೆ ಅದು ಕಾಂಗ್ರೆಸ್ ಸರಕಾರ. ಪರಿಶಿಷ್ಟ ಜಾತಿ ಪಂಗಡದ ಹಾಗೂ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದಲ್ಲೂ ವಿಳಂಬ ನೀತಿ ಅನುಸರಿಸಲಾಗುತ್ತಿದೆ.

ಅಲ್ಪಸಂಖ್ಯಾತರ ಶ್ರಮಶಕ್ತಿ ಲೋನ್ ಸ್ಕೀಮ್ ಗೆ ಮಂಗಳೂರು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ 1728 ಅರ್ಜಿಗಳು ಬಂದಿದ್ದು ಅದರಲ್ಲಿ ಕೇವಲ 8 ಮಂದಿಗೆ ಮಾತ್ರ ಯೋಜನೆ ಫಲಾನುಭವಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ 8 ತಿಂಗಳಿಂದ ಕಾಂಗ್ರೆಸ್ ಸರಕಾರ ಬಂದ ಬಳಿಕ ಅಭಿವೃದ್ಧಿ ಕಾಮಗಾರಿ ಸಂಪೂರ್ಣ ಬಾಕಿಯಾಗಿದೆ.

ಹಿಂದಿನ ಸರಕಾರ ಜಾರಿಗೆ ತಂದಿದ್ದ ಎಲ್ಲಾ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತಡೆಯೊಡ್ಡುವ ಮೂಲಕ ಜನರಿಗೆ ಸಂಕಷ್ಟ ಎದುರಾಗಿದೆ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಇನ್ನಾದರೂ ಅನುದಾನ ಬಿಡುಗಡೆಗೊಳಿಸಿ. ರಸ್ತೆ, ಚರಂಡಿ, ಕುಡಿಯುವ ನೀರು ಇತ್ಯಾದಿ ಕಾಮಗಾರಿ ಅರ್ಧಕ್ಕೇ ಬಾಕಿಯಾಗಿದ್ದು ಕಾಂಗ್ರೆಸ್ ಸರಕಾರ ಜನರ ಹಿತದೃಷ್ಟಿಯಿಂದ ಎಲ್ಲಾ ಕಾಮಗಾರಿಗಳನ್ನು ಪುನರ್ ಆರಂಭ ಮಾಡಲು ಅನುದಾನ ಬಿಡುಗಡೆಗೊಳಿಸಬೇಕು” ಎಂದು ವೇದವ್ಯಾಸ ಕಾಮತ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ರೂಪಾ ಡಿ. ಬಂಗೇರ, ಸುರೇಂದ್ರ, ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಹೆಗ್ಡೆ, ಅಜಯ್ ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago