News Karnataka Kannada
Friday, May 10 2024
ಮಂಗಳೂರು

ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡುಬರುತ್ತಿವೆ: ಕಟೀಲ್

Congress party's governance failures are visible: Kateel
Photo Credit : News Kannada

ಮಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮಿಂದ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರಗೆ ಇದೆ‌ ಎಂದು  ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ .

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡುಬರುತ್ತಿವೆ. ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಕೇವಲ ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದರು.

ಕಳೆದ ನಾಲ್ಕು ವರ್ಷ ಅವಧಿಯಲ್ಲಿ ರಾಜ್ಯಧ್ಯಕ್ಷನಾಗಿ ತೃಪ್ತಿ ಇದೆ, ಕರಾವಳಿಯಿಂದ ಬಂದವನು ಏನು ರಾಜ್ಯವನ್ನು ಸುತ್ತುತ್ತಾನೆ ಅನ್ನೋದಕ್ಕೆ ಅಪವಾದವಾಗಿ ರಾಜ್ಯ ಸುತ್ತಿ ಸಂಘಟನೆ ಮಾಡಿದ್ದೇನೆ. ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ರಾಜ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ಜೊತೆಯಾಗಿ ಪಾರ್ಟಿಯನ್ನು ಕಟ್ಟಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

ರಾಜಕೀಯದಿಂದ ನಿವೃತ್ತಿ ಪಡೆಯುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ನಳಿನ್ ಕುಮಾರ್ ನಗುತ್ತಾ ಸುಮ್ಮನಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು