Categories: ಮಂಗಳೂರು

ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ: ವಾಹನ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಇಂದು (ಫೆ.17) ಕಾಂಗ್ರೆಸ್ ನ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ.  ಎಐಸಿಸಿ ಸೂಚನೆ ಮೇರೆಗೆ ಕೇಸರಿ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ.

ಸಮಾವೇಶ ನಡೆಯುವ ಅಡ್ಯಾರ್ ಮೈದಾನದ ಬಳಿ ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಉಡುಪಿ ಕಡೆಯಿಂದ ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್-ತೊಕ್ಕೊಟ್ಟು-ಮುಡಿಪು -ಮೆಲ್ಕಾರ್ ಮೂಲಕ ಸಂಚರಿಸುವುದು. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್ ಮೂಲಕ ಸಂಚರಿಸಬೇಕಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನ ಪಾರ್ಕಿಂಗ್ ಸ್ಥಳಗಳ ವಿವರ:

  • ಬಂಟ್ವಾಳದಿಂದ ಬರುವ ಗಣ್ಯರ ಕಾರುಗಳು ಹಾಗೂ ಸಾರ್ವಜನಿಕರ ಮೋಟಾರು ಸೈಕಲ್‌ಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕಿಂಗ್ ಗೆ ಅವಕಾಶ ಮಾಡಲಾಗಿದೆ.
  • ಬಂಟ್ವಾಳದಿಂದ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್‌ನ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್.
  • ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಕಾರ್ಯಕರ್ತರನ್ನು ಕಾಮತ್ ಪಾರ್ಕಿಂಗ್ ಬಳಿ ಇಳಿಸಿ ಮೋತಿಶ್ಯಾಮ್/ಷಾ ಮೈದಾನದಲ್ಲಿ ಪಾರ್ಕಿಂಗ್
  • ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್ ಗಾರ್ಡನ್ನಲ್ಲಿ ಪಾರ್ಕಿಂಗ್
  • ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್ಸುಗಳು ಷಾ ಮೈದಾನದಲ್ಲಿ ಪಾರ್ಕಿಂಗ್
  • ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಮೋಟಾರ್ ಸೈಕಲ್‌ಗಳನ್ನು ಅಡ್ಯಾರ್ ಗಾರ್ಡನ್ ಮೈದಾನದಲ್ಲಿ ಪಾರ್ಕಿಂಗ್
  • ಅಡ್ಯಾರ್ ಕಟ್ಟೆಯಲ್ಲಿರುವ ಜಯಶೀಲ ರವರ ಮೈದಾನದಲ್ಲಿ ಕೂಡಾ ಪಾರ್ಕಿಂಗ್ ಮಾಡಲು ಅವಕಾಶ

ಫೆ.17 ರ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ.

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತು ವಾರಿ ರಣದೀಪ್ ಸಿಂಗ್ ಸುರ್ಜೆವಾಲ. ಎಲ್ಲಾ ಸಚಿವರು, ಸಂಸದರು, ಶಾಸಕರು, ಪದಾಧಿಕಾರಿಗಳು, ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಎಲ್ಲಾ ಹಂತದ ಅಧ್ಯಕ್ಷರು ಭಾಗಿಯಾಗಲಿದ್ದಾರೆ.

ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ:

ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸಮಾವೇಶದ ಸಿದ್ಧತೆ ಪರಿಶೀಲಿಸಿದರು.

ಇದೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಮತೀಯವಾದಕ್ಕೆ ಪುಷ್ಠಿ ಕೊಡುವ ಕ್ಷೇತ್ರ, ಆ ಕಾರಣಕ್ಕಾಗಿ ಇಲ್ಲಿ ನಿರಂತರವಾಗಿ ಮತೀಯವಾದಿ ಪಕ್ಷ ಇಲ್ಲಿ ಗೆಲ್ಲುತ್ತಿದೆ.ಆದರೆ ಈ ಬಾರಿ ಆ ರೀತಿ ನಡೆಯಲ್ಲ,ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ ಎಂದರು.

ಮತದಾರರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಆದರೆ ಪ್ರತಿಬಾರಿಯೂ ಈ ತಂತ್ರ ನಡೆಯಲ್ಲ, ಮುಂದಿನ ಲೋಕಸಭಾ ಚುನಾವಣೆಯ ಅಭ್ಯರ್ಥಿಯ ಘೋಷಣೆ ಈ ಸಮಾವೇಶದಲ್ಲಿ ನಡೆಯುವುದಿಲ್ಲ. ಪಕ್ಷದ ಹೈಕಮಾಂಡ್ ಈ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಸರ್ವೇ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷ ನನಗೆ ಎಲ್ಲಾ ಅವಕಾಶ ನೀಡಿದೆ,ಈ ಬಾರಿ ಲೋಕಸಭಾ ಚುನಾವಣೆಗೆ ಅವಕಾಶ ದೊರೆತಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

 

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago