News Karnataka Kannada
Friday, May 03 2024
ಮಂಗಳೂರು

ಕರಾವಳಿಯಲ್ಲಿ ಮರಳು ಸಮಸ್ಯೆಗೆ ಕಾಂಗ್ರೆಸ್‌ ಕಾರಣ: ಜಗದೀಶ್‌ ಶೇಣವ

Congress responsible for sand problem in coastal areas: Jagadish Shenava
Photo Credit : News Kannada

ಮಂಗಳೂರು: ಕರಾವಳಿಯಲ್ಲಿ ಮರಳು ಸಮಸ್ಯೆಗೆ ಕಾಂಗ್ರೆಸ್‌ ಕಾರಣವಾಗಿದ್ದು, ಮರಳು ಮಾಫಿಯಾ ಕೂಡ ಶಾಮೀಲಾಗಿದೆ ಎಂದು ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್‌ ಶೇಣವ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದ ಕ್ಷಣದಿಂದ ಮರಳು ಸಮಸ್ಯೆ ತಲೆದೋರಿದೆ. ಬಿಜೆಪಿ ಅವಧಿಯಲ್ಲಿ ಮರಳು ಸಮಸ್ಯೆ ಇದ್ದರೂ ಮರಳು ನೀತಿಯನ್ನು ಸಡಿಲಿಕೆ ಮಾಡಿ ಕಟ್ಟಡ ನಿರ್ಮಾಣಕ್ಕೆ ಮರಳು ಪೂರೈಕೆಗೆ ಅವಕಾಶ ಕಲ್ಪಿಸಿತ್ತು. ಆದರೆ ಈಗ ನಿರ್ಮಾಣ ಕಾಮಗಾರಿಗೆ ಮರಳು ಇಲ್ಲದೆ ಜಿಲ್ಲೆಯ ಆರ್ಥಿಕತೆಗೂ ಭಾರಿ ಹೊಡೆತ ಬಿದ್ದಿದೆ. ಕಾರ್ಮಿಕರು ಉದ್ಯೋಗ ಇಲ್ಲದೆ ಪರಿತಪಿಸುವಂತಾಗಿದೆ. ಈ ಸಮಸ್ಯೆ ವಿರುದ್ಧ ಮರಳು ಸಂಘಟನೆಗಳು, ಕ್ರೆಡೈ ಹಾಗೂ ಗುತ್ತಿಗೆದಾರರು ನಡೆಸುತ್ತಿರುವ ಹೋರಾಟವನ್ನು ಬಿಜೆಪಿ ಬೆಂಬಲಿಸುವುದಾಗಿ ಹೇಳಿದರು.

ಪ್ರಸಕ್ತ ಕಾಂಗ್ರೆಸ್‌ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳ‍ುಗಿದ್ದು, ಡಿಕೆಶಿ, ಖರ್ಗೆ, ಸಿದ್ದು ಬಣಗಳ ರಾಜಕೀಯದಲ್ಲೇ ಕಾಲ ಕಳೆಯುತ್ತಿದೆ. ಈ ಸರ್ಕಾರ ಯಾವಾಗ ಪತನವಾಗುತ್ತೋ ಗೊತ್ತಿಲ್ಲ. ಸರ್ಕಾರದ ಅಸಡ್ಡೆಯಿಂದಾಗಿ ಅಗತ್ಯ ಕಾಮಗಾರಿಗೆ ಮರಳು ತೆಗೆಯಲೂ ಆಗುತ್ತಿಲ್ಲ, ಒಂದು ವೇಳೆ ತೆಗೆದರೂ ಅದನ್ನು ಸಾಗಿಸಲೂ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಮರಳು ದರ ದುಪ್ಪಟ್ಟು ಆಗಿದ್ದು, ಸಾಮಾನ್ಯರಿಗೆ ಕಟ್ಟಡ ನಿರ್ಮಾಣ ಅಸಾಧ್ಯ ಎಂಬಂತಾಗಿದೆ ಎಂದರು.

ಬಿಜೆಪಿ ಸರ್ಕಾರದ ಅನುದಾನ: ಪ್ರಸಕ್ತ ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಅನುದಾನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಡುಗಡೆ ಮಾಡಿರುವುದು. ಈ ವಿಚಾರ ಗೊತ್ತಿಲ್ಲದೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ಹಾಗೂ ಪಾಲಿಕೆ ವಿಪಕ್ಷ ಸದಸ್ಯ ಎ.ಸಿ.ವಿನಯರಾಜ್‌ ಅವರು ಬಿಜೆಪಿ ಶಾಸಕರ ವಿರುದ್ಧ ಮಾತನಾಡುತ್ತಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಕ್ಷೇತ್ರಕ್ಕೆ 3 ಸಾವಿರ ಕೋಟಿ ರು, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರಿಗೆ 2,500 ಕೋಟಿ ರು., ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ 3 ಸಾವಿರ ಕೋಟಿ ರು. ಮೊತ್ತ ಬಿಡುಗಡೆಯಾಗಿತ್ತು. ಅದೇ ಮೊತ್ತದಲ್ಲಿ ಈಗ ಕಾಮಗಾರಿ ನಡೆಯುತ್ತಿದ್ದು, ಈ ಸತ್ಯ ವಿಚಾರ ಗೊತ್ತಿಲ್ಲದೆ ಕಾಂಗ್ರೆಸಿಗರು ಬಿಜೆಪಿ ಶಾಸಕರ ಮೇಲೆ ವೃಥಾ ಆರೋಪ ಮಾಡುತ್ತಿದ್ದಾರೆ ಎಂದರು.

ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ ಎನ್ನುತ್ತಿರುವ ಕಾಂಗ್ರೆಸಿಗರು, ಜಿಲ್ಲೆಯಲ್ಲಿ ಇನ್ನೂ ಅನೇಕ ಮಂದಿಗೆ ಯೋಜನೆಯಡಿ ಮೊತ್ತವೇ ಖಾತೆಗೆ ಜಮೆಯಾಗುತ್ತಿಲ್ಲ. ನನ್ನ ಮನೆಯ ಕೆಲಸದಾಕೆಯ ಖಾತೆಗೆ ಹಣವೇ ಬಂದಿಲ್ಲ, ನುಡಿದಂತೆ ನಡೆದಿದ್ದೇವೆ ಎಂದು ಸುಳ್ಳು ಹೇಳುವ ಭ್ರಷ್ಟ ಸರ್ಕಾರ ಇದು ಎಂದು ಜಗದೀಶ್‌ ಶೇಣವ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡರಾದ ಕಸ್ತೂರಿ ಪಂಜ, ರವಿಶಂಕರ್‌ ಮಿಜಾರ್‌, ರಾಧಾಕೃಷ್ಣ, ಭರತ್‌ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು