Categories: ಮಂಗಳೂರು

ಜೂಜು ಆಟಗಾರರ ಜೊತೆ ಕಾನ್‌ಸ್ಟೆಬಲ್‌ ಸಂಪರ್ಕ: ಅಮಾನತು

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.

ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ ಖಚಿತ ಮಾಹಿತಿಗಳನ್ನು ಹೊಂದಿದ್ದ ಎಸಿಪಿ ಧನ್ಯಾ ನಾಯಕ್ ತಲಪಾಡಿ ಗಡಿಭಾಗದ ತಚ್ಚಣಿ ಎಂಬಲ್ಲಿಗೆ ದಾಳಿ ನಡೆಸಿದ್ದರು.

ದಾಳಿ ವೇಳೆ, ಪ್ರಮುಖ ಆರೋಪಿಯಾಗಿದ್ದ ತಲಪಾಡಿ ಗ್ರಾಪಂ ಸದಸ್ಯ ಪರಾರಿಯಾಗಿದ್ದ. ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಆದರೆ ಈ ವೇಳೆ, ಕಾನ್ಸ್ ಟೇಬಲ್ ವಾಸುದೇವ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಮತ್ತು ಅವರೊಂದಿಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದ್ದರಿಂದ ಎಸಿಪಿ ನೇರವಾಗಿ ಪೊಲೀಸ್ ಕಮಿಷನರಿಗೆ ವರದಿ ಕೊಟ್ಟಿದ್ದರು. ಇಲಾಖಾ ತನಿಖೆ ಬಾಕಿಯಿರಿಸಿ ಪೊಲೀಸ್ ಕಮಿಷನರ್ ವಾಸುದೇವ ಅವರನ್ನು ಅಮಾನತು ಮಾಡಿದ್ದಾರೆ.

Gayathri SG

Recent Posts

ಕೈದಿ ಹೊಟ್ಟೆಯಲ್ಲಿ ಮೊಬೈಲ್‌ ಕಂಡು ದಂಗಾದ ವೈದ್ಯರು

ಕೈದಿಯೊಬ್ಬ ಮೊಬೈಲ್ ನ್ನು ನುಂಗಿ ಹೊಟ್ಟೆನೋವು ಎಂದು ಕೂಗಾಡುತ್ತಿದ್ದ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋದಾಗ ಹೊಟ್ಟೆಯಲ್ಲಿ ಮೊಬೈಲ್  ಕಂಡು…

8 mins ago

ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆಗೆ ಮುಹೂರ್ತ ಫಿಕ್ಸ್

ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿದೆ.  2023 & 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ…

17 mins ago

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

30 mins ago

ದೆಹಲಿಯಲ್ಲಿ ಮತ್ತಿಬ್ಬರು ಮಾಜಿ ಶಾಸಕರು ಕಾಂಗ್ರೆಸ್‌ಗೆ ರಾಜೀನಾಮೆ

ಲೋಕಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಂದು ಮತ್ತಿಬ್ಬರು ರಾಜೀನಾಮೆ ನೀಡಿದ್ದಾರೆ. ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್‌…

40 mins ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ಇನ್ಮುಂದೆ ಇರಲ್ಲ ಲೌಡ್ ಸ್ಪೀಕರ್‌ ಘೋಷಣೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈವರೆಗೆ ಪ್ರಯಾಣಿಕರ ಮಾಹಿತಿಗಾಗಿ ಲೌಡ್ ಸ್ಪೀಕರ್‌ಗಳಲ್ಲಿ ಹೊರಡಿಸಲಾಗುತ್ತಿದ್ದ ಘೋಷಣೆಗಳನ್ನು ನಿಲ್ಲಿಸಲು ವಿಮಾನ ನಿಲ್ದಾಣ ಆಡಳಿತ…

49 mins ago

ಲಾರಿಯನ್ನು ಕದ್ದ ಕಳ್ಳರು : ಇಬ್ಬರು ಪೊಲೀಸರ ವಶಕ್ಕೆ

ಲಾರಿಯನ್ನು ಕದ್ದ  ಕಳ್ಳರನ್ನು ಬಂಧಿಸಿದ ಘಟನೆ ನಡೆದಿದೆ. ಭಾರತಿ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

1 hour ago