Categories: ಮಂಗಳೂರು

ಕುಕ್ಕರ್ ಸ್ಫೋಟದ ರೂವಾರಿ ಬಂಧನ‌ ಕೇಸ್: ತನಿಖೆಯಲ್ಲಿ‌ ಮತ್ತೊಂದು ಮಾಹಿತಿ ಬಹಿರಂಗ

ಮಂಗಳೂರು: ಮಂಗಳೂರು ಕುಕ್ಕರ್ ಸ್ಫೋಟದ ರೂವಾರಿ ಐಸಿಸ್ ಉಗ್ರ ಅರಾಫತ್ ಅಲಿನನ್ನು ಎನ್​ಐಎ ಬಂಧಿಸಿ ತೀವ್ರ ವಿಚಾರಣೆಗೊಳಪಿಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ‌ ಮತ್ತೊಂದು ವಿಧ್ವಂಸಕ ಮಾಹಿತಿ ಬಹಿರಂಗವಾಗಿದೆ.

ತೀರ್ಥಹಳ್ಳಿ ಬರ್ದರ್ಸ್ ಕಾನ್ಸೆಪ್ಟ್ ಹುಟ್ಟು ಹಾಕಿದ್ದೆ ಅಬ್ದುಲ್ ಮತೀನ್ ಅಂತೆ. ಎನ್​ಐಎ ಮೋಸ್ಟ್ ವಾಂಟೇಡ್ ನಲ್ಲಿರುವ ಅಬ್ದುಲ್ ಮತೀನ್, 2014 ರಲ್ಲೇ ಉಗ್ರವಾದದ ನಂಟು ಅಂಟಿಸಿಕೊಂಡಿದ್ದ. ಬಳಿಕ ವಿದೇಶಕ್ಕೆ ಎಸ್ಕೇಪ್ ಆಗಿದ್ದ. ಈ ವೇಳೆ 2020 ರಲ್ಲಿ ಮಾಜ್ ಮುನೀರ್, ಶಾರೀಕ್ ಹಾಗೂ ಅರಾಫತ್ ಅಲಿ ಗೋಡೆ ಬರಹ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದರು. ಇವರನ್ನು ಅಬ್ದುಲ್ ಮತೀನ್ ಸಂಪರ್ಕ ಮಾಡಿದ್ದ.

ಅಬ್ದುಲ್ ಮತೀನ್ ಸೂಚನೆಯಂತೆ ಅರಾಫತ್ ಅಲಿಯೂ ವಿದೇಶಕ್ಕೆ ಎಸ್ಕೇಪ್ ಆಗಿದ್ದ. ನಂತರ ಅಲ್ಲಿಂದ ಶಾರೀಕ್ ಹಾಗೂ ಮಾಜ್ ಮುನೀರ್ ಗೆ ಉಗ್ರವಾದದ ಪಾಠ ಮಾಡುತ್ತಿದ್ದ. ಇವರಿಗೆ ಮೊದಲು ಟ್ರೈನಿಂಗ್ ಆಗಿ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮಾಡಿಸಿದ್ದ. ಬಳಿಕ ನೀಡಿದ ಮೊದಲ ಟಾರ್ಗೇಟ್ ಕದ್ರಿ ದೇವಸ್ಥಾನದಲ್ಲಿ ಸ್ಫೋಟ. ಆದ್ರೆ ಮೊದಲ‌ ಯತ್ನವೇ ವಿಫಲವಾಗಿತ್ತು. ದಾರಿ ಮಧ್ಯೆಯೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಹೀಗಾಗಿ ತೀರ್ಥಹಳ್ಳಿ ಬ್ರದರ್ಸ್ ಆಗುವ ಕನಸು ಆರಂಭದಲ್ಲಿ ದಾರಿ ತಪ್ಪಿತ್ತು. ಹೀಗಾಗಿಯೇ ಅರಾಫತ್ ಅಲಿ ವಾಪಸ್ಸು ಇಂಡಿಯಾಗೆ ಬಂದಿದ್ದ ಎನ್ನುವ ಅಂಶ ಎನ್​ಐಎ ತನಿಖೆಯಿಂದ ಬೆಳಕಿಗೆ ಬಂದಿದೆ.

ಮಂಗಳೂರು ಕುಕ್ಕರ್ ಸ್ಫೋಟ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು ಭಯೋತ್ಪಾದನಾ ಸಂಚು ಪ್ರಕರಣದ ಪ್ರಮುಖ ಆರೋಪಿ ಅರಾಫತ್ ಅಲಿಯನ್ನು ಎನ್ಐಎ ಸೆಪ್ಟೆಂಬರ್ 14ರಂದು ಬಂಧಿಸಿದೆ.

Ashika S

Recent Posts

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

7 mins ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

24 mins ago

ಅಮ್ಮನ ಮೇಲಿನ ಪ್ರೀತಿಗಾಗಿ ಹೆಸರು ಬದಲಿಸಿಕೊಂಡ ವಿಜಯ್ ಸೂರ್ಯ

ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…

29 mins ago

ಮಲ್ಲಿಕಾರ್ಜುನ ಖರ್ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪರಿಶೀಲಿಸಿದ ಚುನಾವಣಾ ಅಧಿಕಾರಿಗಳು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

54 mins ago

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

1 hour ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

1 hour ago