Categories: ಮಂಗಳೂರು

ಭ್ರಷ್ಟಾಚಾರ ಮುಕ್ತ ಪುತ್ತೂರು: ಶಾಸಕ ಅಶೋಕ್ ಕುಮಾರ್

ಬಂಟ್ವಾಳ: ಅಭಿವೃದ್ಧಿಯ ನೆಪದಲ್ಲಿ ಜನರಿಗೆ ತೊಂದರೆ ನೀಡುವ ಕಾರ್ಯ ಮಾಡುವುದಿಲ್ಲ. ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ ಲಂಚ ಹಣ ನೀಡುವ ಅಗತ್ಯವಿಲ್ಲ. ಸರಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರ ಮನೆಗಳಿಗೆ ತಲುಪಿಸಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಮಂಗಳವಾರ ಸಂಜೆ ವಿಟ್ಲ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ಮತದಾರರಿಗೆ, ಪಕ್ಷದ ಕಾರ್ಯಕರ್ತರಿಗೆ ನಡೆದ ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ ಉತ್ತಮ ವ್ಯಕ್ತಿತ್ವ ಇರುವ ವ್ಯಕ್ತಿ ಪಕ್ಷಕ್ಕೆ ಲಭಿಸಿದ್ದಾರೆ. ಕರಾವಳಿಯ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ಅಶೋಕ್ ಕುಮಾರ್ ರೈ ಮಾಡಲಿದ್ದಾರೆ. ಜನರ ಎಲ್ಲ ಬೇಡಿಕೆಯನ್ನು ಪೂರೈಸಿ ಐದು ವರ್ಷದಲ್ಲಿ ದೊಡ್ಡ ಮಟ್ಟದ ಅಭಿನಂದನೆಯನ್ನು ಪಡೆಯುವಂತಾಗಲಿ ಎಂದು ತಿಳಿಸಿದರು.

ಅಭಿನಂದನಾ ಭಾಷಣ ನೆರವೇರಿಸಿದ ವಿಟ್ಲ ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಾಜಾರಾಮ ಕೆ. ಬಿ. ಮಾತನಾಡಿ ಜಾತ್ಯತೀತ ಮನಸ್ಸುಗಳು ಸೋತು ಹೋದ ದಿನಗಳಲ್ಲಿ ಅಶೋಕ್ ಕುಮಾರ್ ರೈ ಗೆಲುವು ಸಾಧಿಸುವ ಮೂಲಕ ಮತ್ತೆ ಜನರಿಗೆ ಆಶಾಕಿರಣ ಮೂಡಿಸಿದೆ. ಜನರ ಕಷ್ಟಗಳ ಬಗ್ಗೆ ನಿರಂತರ ಕೆಲಸ ಮಾಡಿದ ಶಾಸಕರು ಈಗ ಕ್ಷೇತ್ರದ ಕೆಲಸ ಮಾಡುವಂತಾಗಿದೆ ಎಂದು ತಿಳಿಸಿದರು.

ವಿಟ್ಲ – ಉಪ್ಪಿನಂಡಿ ಬ್ಲಾಕ್ ಕಾಂಗ್ರೆಸ್‌, ವಿಟ್ಲ ನಗರ ಕಾಂಗ್ರೆಸ್ ಸೇರಿ ವಿವಿಧ ಗ್ರಾಮ ಸಮಿತಿಗಳ ವತಿಯಿಂದ ಅಭಿನಂದನೆ ನಡೆಯಿತು.

ಕೆಪಿಸಿಸಿ ಸದಸ್ಯ ಎಂ. ಎಸ್. ಮಹಮ್ಮದ್, ಕಾವು ಹೇಮನಾಥ ಶೆಟ್ಟಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಜೋಕಿಮ್ ಡಿ’ಸೋಜ, ನಝೀರ್ ಮಠ, ಉಮಾನಾಥ ಶೆಟ್ಟಿ, ನೂರುದ್ದೀನ್ ಸಾಲ್ಮರ, ಫಾರೂಕ್ ಪೆರ್ನೆ, ಪದ್ಮನಾಭ ಪೂಜಾರಿ ಸಣ್ಣಗುತ್ತು, ಮಹೇಶ್ ರೈ, ಶ್ರೀನಿವಾಸ ಶೆಟ್ಟಿ ಕೊಲ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ಡೀಕಯ್ಯ, ಪದ್ಮಿನಿ, ಲತಾ ಅಶೋಕ್, ಮೋಹನ ಗುರ್ಜಿನಡ್ಕ, ಎಲ್ಯಣ್ಣ ಪೂಜಾರಿ ಮೈರುಂಡ, ರಾಮಣ್ಣ ಪಿಲಿಂಜ, ಜಯಪ್ರಕಾಶ್ ಬದಿನಾರು, ಸಾಹಿರಾ ಬಾನು, ನೆಬಿಸ, ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳು, ಗ್ರಾಮ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

5 hours ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

6 hours ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…

6 hours ago

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

7 hours ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…

8 hours ago

ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…

8 hours ago