ಸುಳ್ಯ: ಬೈಕ್ ಅಪಘಾತ ಸಂಭವಿಸಿ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ.ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ದಂಪತಿ ಬೈಕ್ ನಲ್ಲಿ ಸುಳ್ಯದಿಂದ ಮಂಡೆಕೋಲಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪಡೀಲ್ ಎಂಬಲ್ಲಿ ಪಾದಚಾರಿಗೆ ಗುದ್ದಿದೆ ಎನ್ನಲಾಗಿದೆ.ಗುದ್ದಿರುವ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.ಪತಿ ಭವಾನಿಶಂಕರ್ ಅವರಿಗೆ ಗಾಯಗಳಾಗಿದ್ದು,ಪತ್ನಿ ಲೀಲಾವತಿ ಅವರ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳಿಬ್ಬರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.