Categories: ಮಂಗಳೂರು

ಅಣೆಕಟ್ಟಿನಲ್ಲಿ ಕ್ರಿಕೆಟ್‌ ಆಟ: ಸಚಿವರ ಭ್ರಷ್ಟಾಚಾರಕ್ಕೆ ಸಾಕ್ಷಿ ಬೇಕೆ ಎಂದ ಮುತಾಲಿಕ್‌

ಮಂಗಳೂರು: ಅಜೆಕಾರು ಗ್ರಾಮದ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಪ್ರದೇಶಕ್ಕೆ ಶ್ರೀರಾಮಸೇನೆ ಮುಖಂಡ, ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿರುವ ಪ್ರಮೋದ್‌ ಮುತಾಲಿಕ್‌ ಭೇಟಿ ನೀಡಿದರು.

ಈ ಯೋಜನೆಗೆ 108 ಕೋಟಿ ರೂ. ವೆಚ್ಚವಾಗಿದ್ದು, ಅಲ್ಲದೆ ತಡೆಗೋಡೆ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 30 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆಯಾಗಿದೆ. ಈ ಯೋಜನೆ ಶಾಸಕರ ಜೇಬು ತುಂಬಿಸುವ ಯೋಜನೆಯಾಗಿದ್ದು, ಇಲ್ಲಿ ಒಂದು ಹನಿ ನೀರು ಕೂಡ ಶೇಖರಣೆಯಾಗಿಲ್ಲ ಎಂದು ಆರೋಪಿಸಿದರು. ಯಾವ ಉದ್ದೇಶದಿಂದ ಈ ಯೋಜನೆಯನ್ನು ಮಂತ್ರಿಗಳು ಮಾಡಿದ್ದರೋ ಅದು ಸಂಪೂರ್ಣವಾಗಿ ವಿಫಲವಾಗಿದೆ. ಯೋಜನೆ ಅವೈಜ್ಞಾನಿಕವಾಗಿದೆ. ರಸ್ತೆಯಲ್ಲಿ ಓಡಾಡುವ ಜನರಿಗೆ ತೋರಲೆಂದು ಏತ ನೀರಾವರಿ ಯೋಜನೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಮಳೆಗಾಲ ಆರಂಭಕ್ಕೆ 2 ತಿಂಗಳು ಬಾಕಿಯಿದೆ. ಈಗ ನೀರಿನ ಹಾಹಾಕಾರ ಇದೆ. ಜನರಿಗೆ ಪ್ರಸ್ತುತ ನೀರಿನ ಅಗತ್ಯವಿದೆ. ಆದರೆ ಈಗ ಅಣೆಕಟ್ಟಿಯಲ್ಲಿ ಹನಿ ನೀರೂ ಕೂಡ ಇಲ್ಲ ಎಂದರು. ಯೋಜನೆ ಉದ್ಘಾಟನೆಗೊಂಡು ವರ್ಷ ಪೂರ್ಣಗೊಂಡಿಲ್ಲ. 1 ಕೋಟಿ ರೂ. ಖರ್ಚು ಮಾಡಿ ಉದ್ಘಾಟನಾ ಕಾರ್ಯಕ್ರಮ ಮಾಡಿದ್ದಾರೆ. ಯೋಜನೆ ಮೂಲಕ ಶಾಸಕರು ಜನರ ಕಣ್ಣಿಗೆ ಮಣ್ಣೆರೆಚಿ ಮೋಸ ಮಾಡಿದ್ದಾರೆ. ಜನರ ಅಭಿವೃದ್ಧಿಗೆ ಅಣೆಕಟ್ಟು ಕಟ್ಟಿಲ್ಲ. ಜನಪ್ರತಿನಿಧಿ, ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವಂತ ಸಾಕ್ಷಿಯಾಗಿದೆ. ಈ ನಿಟ್ಟಿನಲ್ಲಿ ಕ್ರಿಮಿನಲ್‌ ಪ್ರಕರಣಕ್ಕೆ ಚಿಂತಿಸುತ್ತಿದ್ದೇವೆ.

ಹರೀಶ್‌ ಅಧಿಕಾರಿ, ರಾಘವ್‌ ಮುದ್ರಾಡಿ ನಾಗೇಶ್‌ ಪೈ, ವಿವೇಕಾನಂದ ಶೆಣೈ, ಸತ್ಯರಂಜನ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಯೋಜನೆ ಪ್ರದೇಶದಲ್ಲಿ ಕ್ರಿಕೆಟ್‌ ಆಟ: ಎಣ್ಣೆಹೊಳೆ ಏತ ನೀರಾವರಿ ಯೋಜನೆ ಪ್ರದೇಶದಲ್ಲಿಯೇ ಶ್ರೀರಾಮ ಸೇನೆ ಮುಖಂಡ ಮುತಾಲಿಕ್‌, ಹರೀಶ್‌ ಅಧಿಕಾರಿ, ರಾಘವ್‌ ಮುದ್ರಾಡಿ ನಾಗೇಶ್‌ ಪೈ, ವಿವೇಕಾನಂದ ಶೆಣೈ, ಸತ್ಯರಂಜನ್‌ ಶೆಟ್ಟಿ ಮೊದಲಾದವರು ಕ್ರಿಕೆಟ್‌ ಆಟವಾಡುವ ಮೂಲಕ ನೀರಿನ ಸಂಗ್ರಹವಿಲ್ಲದಿರುವುದನ್ನು ತೋರಿಸಿ ವ್ಯಂಗ್ಯವಾಡಿದರು.

Gayathri SG

Recent Posts

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

16 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

43 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

60 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

2 hours ago