Categories: ಮಂಗಳೂರು

ಮಂಗಳೂರು: ದ‌.ಕ‌. ಕೇಟರಿಂಗ್ ಮಾಲೀಕರ ಸಂಘದ ಅಧ್ಯಕ್ಷರಾಗಿ ರಾಜಗೋಪಾಲ್ ರೈ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಕೇಟರಿಂಗ್ ಮಾಲೀಕರ ಸಂಘ(ರಿ)ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ಮಂಗಳೂರಿನಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ರಾಜಗೋಪಾಲ್ ರೈ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಜೋಸಿ ಸಿಕ್ವೆರಾ, ಕೋಶಾಧಿಕಾರಿಯಾಗಿ ರಾಜೇಶ್ ಶೆಟ್ಟಿ ಶಬರಿ ಅವರನ್ನು ಆರಿಸಲಾಗಿದೆ.

ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ದಕ್ಷಿಣ ಕನ್ನಡ ಕೇಟರಿಂಗ್ ಮಾಲೀಕರ ಸಂಘ ಕಳೆದ ಹಲವಾರು ವರ್ಷಗಳಿಂದ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಕೊರೋನಾ ಸಂದರ್ಭದಲ್ಲಿ ಬಡವರಿಗೆ ಹಾಗೂ ಹಸಿವಿನಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವ ಮೂಲಕ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ. ರಾಜಗೋಪಾಲರೈ ಅವರ ಅಧ್ಯಕ್ಷತೆಯಲ್ಲಿ ಸಂಘವು ಮುಂದೆಯೂ ಉತ್ತಮ ಕಾರ್ಯ ನಿರ್ವಹಣೆಯ ಮೂಲಕ ಸಮಾಜಕ್ಕೆ ಉತ್ತಮ ಸೇವೆ ನೀಡಲಿ ಎಂದು ಆಶಿಸಿದರು.

ನೂತನ ಅಧ್ಯಕ್ಷ ರಾಜಗೋಪಾಲ ರೈ ಮಾತನಾಡಿ, ಹಲವು ವರ್ಷಗಳ ಹಿಂದೆ ಕೇಟರಿಂಗ್ ಮಾಲೀಕರು ಸಂಘಟನೆ ಇಲ್ಲದೆ ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದರು. ಇದೀಗ ಜಿಲ್ಲೆಯ ಕೆಟರಿಂಗ್ ಮಾಲೀಕರನ್ನು ಒಟ್ಟು ಸೇರಿಸುವ ಮೂಲಕ ಸಂಘಟನೆಗೆ ಹೊಸ ಶಕ್ತಿಯನ್ನು ತುಂಬಲಾಗಿದೆ. ಇದರಿಂದ ಹಲವು ಸಮಾಜ ಸೇವಾ ಕಾರ್ಯಗಳು ಸಾಕಾರಗೊಂಡಿವೆ ಎಂದು ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಅವರು ಸಂಘದ ಎಲ್ಲಾ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಮುಂದೆಯೂ ಅವರ ಸಹಕಾರವನ್ನು ಕೋರುವುದಾಗಿ ರಾಜಗೋಪಾಲ ರೈ ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಕೇಟರಿಂಗ್ ಒಂದು ಸೇವೆಯೇ ಹೊರತು ಉದ್ಯಮವಲ್ಲ, ಅದನ್ನು ಇದೇ ಮಾದರಿಯಲ್ಲಿ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ಶ್ಲಾಘಿಸಿದರು. ನಿರ್ಗಮಿತ ಅಧ್ಯಕ್ಷ ಸಂತೋಷ ಡಿಸೋಜ ಅವರು ನಿಯೋಜಿತ ಅಧ್ಯಕ್ಷ ರಾಜಗೋಪಾಲ ರೈ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಗೂ ಪ್ರತಿಭಾನ್ವಿತ ಮಕ್ಕಳನ್ನು ಅಭಿನಂದಿಸಲಾಯಿತು. ಉದ್ಯಮಿ ಸದಾನಂದ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೊರೇಟರ್ ಸಂದೀಪ್ ಗರೋಡಿ, ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ ಕಾರಂತ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಸಂಘದ ಗೌರವಾಧ್ಯಕ್ಷ ಸುಧಾಕರ ಕಾಮತ್, ಉದ್ಯಮಿಗಳಾದ ಇಕ್ಬಾಲ್ ಗೋಲ್ಡ್ ಪ್ಯಾಲೇಸ್, ಅಬ್ದುಲ್ ಕರೀಂ ಮತ್ತಿತರರು ಇದ್ದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago