ಮಂಗಳೂರು: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಆ.15ರಂದು ಬೆಳಿಗ್ಗೆ 9ಗಂಟೆಗೆ ಸ್ವಾತಂತ್ರೋತ್ಸವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡುವರು.
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ಡಾ. ಡಿ. ವಿರೇಂದ್ರ ಹೆಗ್ಗಡೆ, ವಿಧಾನ ಸಭಾ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಉಮಾನಾಥ್ ಎ. ಕೋಟ್ಯಾನ್, ಡಿ. ವೇದವ್ಯಾಸ್ ಕಾಮತ್, ಅಶೋಕ್ ಕುಮಾರ್ ರೈ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಎಸ್.ಎಲ್. ಭೋಜೆಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಗಳೂರು ಮೇಯರ್ ಜಯಾನಂದ ಅಂಚನ್ ಭಾಗವಹಿಸುವರು.