News Karnataka Kannada
Saturday, April 13 2024
Cricket
ಮಂಗಳೂರು

ಸಾಮಾಜಿಕ ಹೊಣೆಗಾರಿಕೆ ಕೆಲಸಗಳಿಗೆ ದಕ್ಷಿಣ ಕನ್ನಡ ಜಿಲ್ಲೆ ಮಾದರಿ: ಮುಲ್ಲೈ ಮುಗಿಲನ್

Dakshina Kannada district is a model for social responsibility works: Mullai Mugilan
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಹೊಣೆಗಾರಿಕೆ ಅರಿತುಕೊಂಡು ನಡೆಯುತ್ತಿರುವ ಕೆಲಸಗಳು ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಶ್ಲಾಘಿಸಿದರು.

ಅವರು  ವೆನ್ ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವೆನ್ಲಾಕ್ ಆಸ್ಪತ್ರೆ, ಇಂಡಿಯನ್ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆರಂಭಗೊಂಡಿರುವ ಸಮುದಾಯ ವಾಚನಾಲಯದ ಚಟುವಟಿಕೆಗಳನ್ನು ವೀಕ್ಷಿಸಿ ಈ ವಾಚನಾಲಯದ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಓದಲು ದಿನ ಪತ್ರಿಕೆ, ನಿಯತಕಾಲಿಕಗಳನ್ನು ರೋಗಳಿಗೆ ದಾನಿಗಳ ನೆರವಿನಿಂದ ಒದಗಿಸುತ್ತಿರುವುದು, ಅದನ್ನು ರೋಗಿಗಳಿಗೆ ಸ್ವಯಂ ಸೇವಾ ನೆಲೆಯಲ್ಲಿ ತಲುಪಿಸುತ್ತಿರುವುದು, ಓದುವ ಹವ್ಯಾಸ ಉಳಿಸುವ ನಿಟ್ಟಿನಲ್ಲಿ ಉತ್ತಮ ಕೆಲಸ. ಈ ರೀತಿಯ ಸಾಮಾಜಿಕ ಕಾರ್ಯಗಳಿಗೆ ರೆಡ್ ಕ್ರಾಸ್, ಪತ್ರಕರ್ತರ ಸಂಘ ಇತರ ಸಂಸ್ಥೆಗಳು ಸಹಕಾರ ನೀಡುತ್ತಿರುವುದು ಇತರರಿಗೆ ಮಾದರಿ ಎಂದರು. ತಾನೂ ಯುವ ರೆಡ್ ಕ್ರಾಸ್ ಘಟಕದ ಸದಸ್ಯನಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಪ್ರೋತ್ಸಾಹಿಸಿದರು.

ಸಮುದಾಯ ವಾಚನಾಲಯಕ್ಕೆ ಪತ್ರಿಕೆ ಒದಗಿಸುತ್ತಿರುವ ದಾನಿಗೆ ಗೌರವಾರ್ಪಣೆ: ಇದೇ ಸಂದರ್ಭದಲ್ಲಿ ಸಮುದಾಯ ವಾಚನಾಲಯಕ್ಕೆ ಅಗತ್ಯವಿರುವ ಪತ್ರಿಕೆಗಳನ್ನು ಖರೀದಿಸಲು ಅದರ ವೆಚ್ಚ ವನ್ನು ಕೊಡುಗೆಯಾಗಿ ನೀಡಿರುವ ಅನಘ ರಿಫೈನರಿಯ ಮಾಲಕರಾದ ಸಾಂಬ ಶಿವರಾವ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್  ಸಂಘಟಕರ ಪರವಾಗಿ ಗೌರವಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್, ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ವೈದ್ಯಕೀಯ ಅಧೀಕ್ಷಕ ಡಾ.ಸದಾಶಿವ ಶ್ಯಾನ್ ಬೋಗ್, ಇಂಡಿಯನ್ ರೆಡ್ ಕ್ರಾಸ್ ಸಭಾಪತಿ ಸಿ.ಎ.ಶಾಂತರಾಮ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಇಂಡಿಯನ್ ರೆಡ್ ಕ್ರಾಸ್ ಘಟಕದ ಹಿರಿಯ ಸಲಹೆಗಾರರು ಮಾಜಿ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ, ಇಂಡಿಯನ್ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕದ ಹಿರಿಯ ಸದಸ್ಯರಾದ ರವೀಂದ್ರನಾಥ ಉಚ್ಚಿಲ್ , ವೆನ್ಲಾಕ್ ಆಸ್ಪತ್ರೆಯ ವೈದ್ಯರಾದ ಡಾ.ಕೆ.ಆರ್ ಕಾಮತ್, ಯುವ ರೆಡ್ ಕ್ರಾಸ್ ಘಟಕದ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು