News Karnataka Kannada
Friday, May 10 2024
ಸಮುದಾಯ

ಸೆ.21ರಂದು ಸಂತ ಮದರ್ ತೆರೇಸಾ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣ

Dakshina Kannada district level seminar to be held on September 21 to mark Mother Teresa's death anniversary
Photo Credit : News Kannada

ಮಂಗಳೂರು: ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ ೨೬ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 21ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವೈವಿಧ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು ಎಂಬ ವಿಷಯದಲ್ಲಿ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ನಡೆಯಲಿದೆ.

ವಿಚಾರ ಸಂಕಿರಣದ ಉದ್ಘಾಟನೆಯನ್ನು ನಾಡಿನ ಹಿರಿಯ ಪತ್ರಕರ್ತರು, ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟುರವರು ನೆರವೇರಿಸಲಿದ್ದು, ವಿಷಯ ಮಂಡನೆಯನ್ನು ಖ್ಯಾತ ಸಾಹಿತಿಗಳು, ಬರಹಗಾರರಾದ ಡಾ. ಕೆ.ಶೆರೀಫಾರವರು ಮಾಡಲಿದ್ದಾರೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ರಾದ ಕೆ.ಅಶ್ರಫ್ ರವರು ಪ್ರತಿಕ್ರಿಯೆ ನೀಡಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ವಹಿಸಲಿದ್ದಾರೆ.

ಉದ್ಘಾಟನಾ ಸಮಾರಂಭದ ಮೊದಲು 9.30ಕ್ಕೆ ಏಕತಾರಿ ಹಾಡುಗಾರ ನಾದಾ ಮಣಿನಾಲ್ಕೂರು ಬಳಗ ಹಾಗೂ ಜನಪ್ರೀತಿ ಬಳಗದವರಿಂದ ಪ್ರೀತಿಯ ಸಿಂಚನ ಎಂಬ ಸೌಹಾರ್ದ ಗಾಯನ ಕಾರ್ಯಕ್ರಮ ನಡೆಯಲಿದೆ.

ಪ್ರೀತಿ ಹಾಗೂ ಸೇವೆಯ ಮೂಲಕ ಜಗತ್ತಿನಾದ್ಯಂತ ಕೋಟ್ಯಾಂತರ ಹ್ರದಯಗಳನ್ನು ಗೆದ್ದ ಜಗತ್ತಿನ ಮಹಾತಾಯಿ ಸಂತ ಮದರ್ ತೆರೇಸಾರವರ ಚಿಂತನೆ ಹಾಗೂ ಆದರ್ಶಗಳನ್ನು ಇಂದಿನ ಯುವಪೀಳಿಗೆಯ ಮಧ್ಯೆ ಕೊಂಡೊಯ್ಯವ ಸಲುವಾಗಿ 2017ರಲ್ಲಿ ಜನ್ಮ ತಾಳಿದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯು ವಿಚಾರ ಸಂಕಿರಣ, ಸಂವಾದ, ಸೌಹಾರ್ದ ಹಬ್ಬಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳ ಮೂಲಕ ಸರ್ವ ಧರ್ಮದ ಜನತೆಯ ಪ್ರೀತಿ ವಿಶ್ವಾಸಗಳನ್ನು ಗಳಿಸಿದೆ. ಮಾತ್ರವಲ್ಲದೆ ಮಾನವೀಯ ಹೃದಯಗಳನ್ನೊಳಗೊಂಡ ಜಾತ್ಯಾತೀತರ ಹಾಗೂ ಸೌಹಾರ್ದ ಕೂಟವಾಗಿ ಹೊರಹೊಮ್ಮಿದೆ.

ನಗರದ ಖ್ಯಾತ ವಿಚಾರವಾದಿಗಳು, ಪ್ರಾಧ್ಯಾಪಕರು, ಸಾಹಿತಿಗಳು, ಪತ್ರಕರ್ತರು, ಪ್ರಗತಿಪರ ಚಿಂತಕರು, ಉದ್ಯಮಿಗಳು, ವಿದ್ಯಾರ್ಥಿ, ಯುವಜನರು, ಮಹಿಳೆಯರು, ದಲಿತ, ಆದಿವಾಸಿ, ಮಧ್ಯಮ ವರ್ಗದ ನೌಕರರ ಸಂಘಟನೆಗಳ ಮುಖಂಡರು ಸೇರಿದಂತೆ ಸರ್ವ ಧರ್ಮದ ೧೩೦ರಷ್ಟು ಗಣ್ಯಾತಿಗಣ್ಯರು ಈ ವೇದಿಕೆಯಲ್ಲಿ ನಿಸ್ವಾರ್ಥವಾಗಿ ಪಾಲ್ಗೊಂಡು ಸಕ್ರಿಯರಾಗಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಇಂತಹ ಚಟುವಟಿಕೆಗಳನ್ನು ಇನ್ನಷ್ಟು ಮುತುವರ್ಜಿಯಿಂದ ನಡೆಸುವ ಮೂಲಕ ಮಂಗಳೂರಿನ ಸೌಹಾರ್ದ ಪರಂಪರೆಯನ್ನು ಉಳಿಸಿ ಬೆಳೆಸುವುದೇ ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಮೂಲ ಆಶಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು