Categories: ಮಂಗಳೂರು

ದ.ಕ.ಜಿಲ್ಲಾ ಯುವ ಜೆಡಿಎಸ್ ಜಿಲಾಧ್ಯಕ್ಷರಿಂದ ಬಿಜೆಪಿ ಸಂಸದ ರಾಜ್ಯಧ್ಯಕ್ಷರ ವಿರುದ್ದ ಪ್ರತಿಭಟನೆ

ಮಂಗಳೂರು: ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲು ವಿರುದ್ದ ದ.ಕ ಜಿಲ್ಲಾ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಲಾಯಿತು.
ಈ ವೇಳೆ ಮಾತನಾಡಿದ ಅಕ್ಷಿತ್ ಸುವರ್ಣ ರಾಜ್ಯದ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿರುವ ದೇವೆಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ಅವರ ವರ್ತನೆ ಖಂಡನೀಯ. ದೇಶದ ಪ್ರಧಾನಿಯಾಗಿ ಅವರು ನೀಡಿರುವ ಕೊಡುಗೆಯನ್ನು ನಳಿನ್ ಮರೆತಿರಬಹುದು ಆದರೆ ದೇಶದ ಜನರು ಮರೆತಿಲ್ಲ. ರಾಜಕೀಯದಲ್ಲಿ ತನ್ನದೇ ಕೊಡುಗೆ ನೀಡಿರುವ ದೇವೆಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ವಿರುದ್ದ ಲಘುವಾಗಿ ಮಾತನಾಡಿದ್ದು, ದೇವೆಗೌಡರ ಕೊಡುಗೆಯ ಕನಿಷ್ಠ ಒಂದು ಪಾಲು ಸೇವೆಯನ್ನು ನೀಡದ ಇವರಿಗೆ ಗೌಡರ ಕುಟುಂಬದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿ ಮಾಡಿ ಅನೈತಿಕವಾಗಿ ಸರಕಾರ ರಚನೆ ಮಾಡಿದ್ದು ಬಿಟ್ಟರೆ ಇವರ ಸಾಧನೆ ಬೇರೆ ಏನು ಇಲ್ಲ.  ಕೂಡಲೇ ಅವರು ದೇವೆಗೌಡರ ಕ್ಷಮೆಯನ್ನು ಯಾಚಿಸಬೇಕು  ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದರು.
ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗು ಜಿಲ್ಲಾ ಸಂಘಟನಾ ಉಸ್ತುವಾರಿಯಾದ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ,  ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು,  ಹಾಗು ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನಯ್,  ಗೌತಮ್, ವಿನಿತ್, ರಿನಿತ್, ನಿಶಾಂತ್, ಗಗಾಣೀಶ್ ,ಪ್ರದೀಪ್ ಕೀರ್ತಿಕ್, ಪವನ್, ಧನುಷ್, ಸುಶಾಂತ್, ವಿನಯ್ ,ಜಯದೀಪ್   ಧನುಷ್ ಪೂಜಾರಿ ಮುಂತಾದವರು ಪಾಲ್ಗೊಂಡಿದ್ದರು.
Sneha Gowda

Recent Posts

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

4 mins ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

12 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

27 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

52 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

1 hour ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

2 hours ago