ಮಂಗಳೂರು

ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕೆಲವು ನಿಯಮಗಳ ತಿದ್ದುಪಡಿಗೆ ಒತ್ತಾಯ

ಮಂಗಳೂರು: ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕೆಲವು ನಿಯಮಗಳ ತಿದ್ದುಪಡಿಗಳನ್ನು ರಾಜ್ಯ ಸರ್ಕಾರವು ಸರ್ಕಾರ ಈ ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಶಾಸಕರಾದ ಮಂಜುನಾಥ ಭಂಡಾರಿ ಅವರು ಒತ್ತಾಯ ಮಾಡಿದ್ದಾರೆ.

ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇ ಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯ ಮೂಲಕ ಆದೇಶವೊಂದನ್ನು ಪಂಚಾಯತ್ಗಳಿಗೆ ರವಾನಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಹಾಗೂ ಪಂಚಾಯತ್  ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿ ಗ್ರಾಮ ಸ್ವರಾಜ್ಯದ ಆಶಯಗಳಿಗೆ ಕೊಡಲಿಯೇಟು ನೀಡಿದ್ದಾರೆ ಎಂದು ಶಾಸಕರಾದ ಮಂಜುನಾಥ ಭಂಡಾರಿಯವರು ಆರೋಪಿಸಿದ್ದಾರೆ.

ಸರ್ಕಾರವು ಈ ಹಿಂದೆ ಗ್ರಾಮಪಂಚಾಯಿತಿ ಅಧ್ಯಕ್ಷರಿಗೆ ನೀಡಿರುವ ಆರ್ಥಿಕ ವ್ಯವಹಾರಗಳಿಗೆ ಸಹಿ ಮಾಡುವ ಅಧಿಕಾರವನ್ನು ಪ್ರಧಾನಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್  ಅಧಿನಿಯಮ 1993ರ ಕೆಲವು ಪ್ರಕರಣಗಳಿಗೆ ತಿದ್ದುಪಡಿ ಮಾಡುವ ಮೂಲಕ ಗ್ರಾಮಪಂಚಾಯತ್ಅಧ್ಯಕ್ಷರ ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿದೆ.

ಕೆಲ ಗ್ರಾಮ ಪಂಚಾಯತಿಗಳಲ್ಲಿ ಸಾಮಾನ್ಯ ಸಭೆ ಸಕಾಲದಲ್ಲಿ ನಡೆಯದ ನೆಪಮುಂದಿರಿಸಿ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ವಿತರಿಸಬೇಕಾದ ಕಟ್ಟಡ ಪರವಾನಿಗೆ, ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಲು, ಹೋಟೇಲು/ಅಂಗಡಿಗಳಿಗೆ ಪರವಾನಿಗೆ ನೀಡುವ ಪಂಚಾಯತ್ ರಾಜ್  ಅಧಿನಿಯಮ 1993ರ ಪ್ರಕರಣ 64ರಿಂದ 70ಕ್ಕೆ ತಿದ್ದುಪಡಿ ಮೂಲಕ ಸದ್ರಿ ಪ್ರಮಾಣ ಪತ್ರಗಳಿಗೆ ಸಾಮಾನ್ಯ ಸಭೆ ಅನುಮೋದನೆ ಇಲ್ಲದೆ ನೇರವಾಗಿ ಪಿಡಿಒಗಳು ವಿತರಿಸಿ ಮುಂದಿನ ಸಾಮಾನ್ಯ ಸಭೆಗೆ ಮಾಹಿತಿ ಒದಗಿಸಲು ಆದೇಶಿಸಲಾಗಿದೆ.

ಹಾಗೆಯೇ9/11 ಮತ್ತು11ಬಿ, ನಿರಾಕ್ಷೇಪಣಾ ಪತ್ರವನ್ನೂ ಸಾಮಾನ್ಯ ಸಭೆ ಅನುಮೋದನೆ ಇಲ್ಲದೆ ನೇರವಾಗಿ ಪಿಡಿಒಗಳು ವಿತರಿಸಿ ಮುಂದಿನ ಸಾಮಾನ್ಯ ಸಭೆಗೆ ಮಾಹಿತಿ ಒದಗಿಸಲು ಆದೇಶಿಸಲಾಗಿದೆ. ಇದು ಪ್ರಜಾಪ್ರಭುತ್ವದ ಬುಡಕ್ಕೆ ಕೊಡಲಿ ಏಟು ಹಾಕಿದೆ ಹಾಗೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿರುವ ಚುನಾಯಿತ ಜನಪ್ರತಿನಿಧಿಗಳ ಕತ್ತು ಹಿಸುಕಿದಂತಾಗಿದೆ.

2006ನೇ ಇಸ್ವಿಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಕಾಯ್ದೆಗೆ ತಂದ ತಿದ್ದುಪಡಿಯ ಆಧಾರದ ಮೇಲೆ ಗ್ರಾಮ ಪಂಚಾಯತಿಯ ಹಣಕಾಸಿನ ವ್ಯವಹಾರವನ್ನು ಸರ್ಕಾರ ಅಧಿಸೂಚಿಸುವ ಅಧಿಕಾರಿ ಅಥವಾ ಪ್ರಾಧಿಕಾರ ನಿರ್ವಹಿಸಲು ಇರುವ ಉಪಬಂಧವಿದ್ದು ಅಧಿಸೂಚನೆಯ ಮೂಲಕ ಅಧ್ಯಕ್ಷರು ಮತ್ತು ಪಿಡಿಒಗೆ ಜಂಟಿಯಾಗಿ ನಿರ್ವಹಿಸಲು ನೀಡಿದ್ದ ಅವಕಾಶವನ್ನು ಹಿಂಪಡೆಯಲಾಗಿದೆ.

ಕೆಲ ಅಧ್ಯಕ್ಷರು ಯೋಜನೆಗಳ ಬಿಲ್ಲು ಪಾವತಿಯನ್ನು ವಿಳಂಬಿಸುವುದನ್ನು ಮತ್ತು ಚುನಾಯಿತ ಜನಪ್ರತಿನಿಧಿಗಳು ಹಣಕಾಸಿನ ವ್ಯವಹಾರಕ್ಕೆ ಉತ್ತರದಾಯಿತ್ವ ಹೊಂದಿಲ್ಲದಿರುವುದನ್ನು ನೆಪವಾಗಿವಾಗಿರಿಸಿ ಗ್ರಾಮಪಂಚಾಯತಿ ಯಹಣಕಾಸಿನ ವ್ಯವಹಾರವನ್ನು ಪಿಡಿಓ ಮತ್ತು ಲೆಕ್ಕ ಸಹಾಯಕರಿಗೆ ಜಂಟಿಯಾಗಿ ನೀಡಲಾಗಿದೆ. ಇದರಿಂದ ಭ್ರಷ್ಟಾಚಾರ ಇನ್ನಷ್ಟು ಹೆಚ್ಚಾಗಲಿದೆ.

ಆದ್ದರಿಂದ ಅಧ್ಯಕ್ಷರ ಹಾಗೂ ಪಂಚಾಯತ್  ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಿ ಗ್ರಾಮಸ್ವರಾಜ್ಯದ ಆಶಯಗಳಿಗೆ ಕೊಡಲಿಯೇಟು ನೀಡಿರುವ ಈ ತಿದ್ದುಪಡಿಗಳನ್ನು ರಾಜ್ಯ ಸರ್ಕಾರವು ಸರ್ಕಾರ ಈ ಕೂಡಲೇ ಇದನ್ನು ಹಿಂದಕ್ಕೆ ಪಡೆಯಬೇಕೆಂದು ಸ್ಥಳೀಯ ಜನಪ್ರತಿನಿಧಿಗಳ ಪ್ರತಿನಿಧಿಯಾಗಿ ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸುತ್ತೇನೆ. ಈ ಬಗ್ಗೆ ಇತರೆ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸುವ ಶಾಸಕರೊಂದಿಗೆ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ ರೂಪಿಸಲಾಗುವುದು ಎಂದು ಶಾಸಕರಾದ ಮಂಜುನಾಥ ಭಂಡಾರಿ ಅವರು ತಿಳಿಸಿರುತ್ತಾರೆ.

Gayathri SG

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

17 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

27 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago