ಮಂಗಳೂರು

ಅಪಾಯಕಾರಿ ಸ್ಥಿತಿಯಲ್ಲಿರುವ ಫ್ಲೆಕ್ಸ್‌ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ವಿಕೋಪಗಳು ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ಈ ಬಗ್ಗೆ ಸೂಕ್ತ ರಕ್ಷಣಾ ಕಾರ್ಯಾಚರಣೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಜಿಲ್ಲಾಡಳಿತದ ಕರ್ತವ್ಯವಾಗಿರುತ್ತದೆ. ಜಿಲ್ಲೆಯ ರಸ್ತೆಯ ಬದಿಗಳಲ್ಲಿ ಅಳವಡಿಸಲಾಗಿರುವ ಜಾಹೀರಾತು ಫಲಕಗಳು ಗಾಳಿ ಮಳೆಯ ಪರಿಣಾಮದಿಂದಾಗಿ ರಸ್ತೆಗೆ ಬಿದ್ದು ಅಪಘಾತ, ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ.

ಈ ಕಾರಣದಿಂದ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ರಸ್ತೆಯ ಬದಿಗಳಲ್ಲಿ ಅಪಾಯಕಾರಿ ಜಾಹೀರಾತು ಫಲಕ, ಪ್ಲೆಕ್ಸ್ ಗಳ (ಆಧಿಕೃತ ಅನಧಿಕೃತ) ಬಗ್ಗೆ ಸಮೀಕ್ಷೆ ನಡೆಸಿ ಅಪಾಯಕಾರಿಯಾಗಿ ಕಂಡುಬರುವ ಜಾಹೀರಾತು ಫಲಕಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ತೆರವುಗೊಳಿಸುವಂತೆ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Gayathri SG

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

6 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

18 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

20 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

28 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

31 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

39 mins ago