News Karnataka Kannada
Sunday, April 14 2024
Cricket
ಮಂಗಳೂರು

ಅಕ್ರಮ ಜಾನುವಾರು ಸಾಗಾಟ ತಡೆಗೆ ಜಿಲ್ಲಾಧಿಕಾರಿ ಆದೇಶ

Mangaluru: In the last five years, cow lovers have been relieved
Photo Credit : News Kannada

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜೂ.29ರಂದು ನಡೆಯುವ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭ ಜಾನುವಾರುಗಳನ್ನು ಅನಧಿಕೃತವಾಗಿ ವಧೆ ಮಾಡುವ ಮತ್ತು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವುದನ್ನು ತಡೆಗಟ್ಟುವ ಸಲುವಾಗಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು.

ಎಲ್ಲಾ ಇಲಾಖೆಗಳ ಸಮನ್ವಯ ಸಾಧಿಸಿ ಮುಂಬರುವ ಬಕ್ರೀದ್ ಹಬ್ಬದ ಸಂಧರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಅನಧಿಕೃತ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಮತ್ತು ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು

ಜಾನುವಾರು ಸಾಗಾಣಿಕೆ ಪರವಾನಿಗೆ ಅನ್ ಲೈನ್ ತಂತ್ರಾಂಶದ ಮಾಹಿತಿಯನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡು ಅನಧಿಕೃತ ಜಾನುವಾರು ಸಾಗಾಣಿಕೆ ತಡೆಗಟ್ಟಲು ಸೂಚಿಸಿದರು.

ಸಭೆಯಲ್ಲಿ ಪೊಲೀಸ್ ಉಪಾಯುಕ್ತ ಅಂಶುಕುಮಾರ್, ಜಿಲ್ಲಾ ಎಸ್ಪಿ ಸಿಬಿ ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ರವಿಕುಮಾರ್ ಎಂ, ದ.ಕ.ಜಿಪಂ ಉಪ ಕಾರ್ಯದರ್ಶಿ ಕೆ. ಆನಂದ ಕುಮಾರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಎನ್., ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಡಾ. ರವಿ ಡಿ.ಆರ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು