ಮಂಗಳೂರು

ಧರ್ಮಸ್ಥಳ ಲಕ್ಷದೀಪೋತ್ಸವ: ರಾಜ್ಯಮಟ್ಟದ 43ನೇ ವಸ್ತು ಪ್ರದರ್ಶನ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಲಕ್ಷದೀಪೋತ್ಸವ ಮಹೋತ್ಸವದ ಆರಂಭದ ದಿನವಾದ ಶನಿವಾರ (ನ.19) ರಾಜ್ಯಮಟ್ಟದ 43ನೇ ವಸ್ತು ಪ್ರದರ್ಶನ ಉದ್ಘಾಟನೆಗೊಂಡಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಹರೀಶ್ ಪೂಂಜಾ ಅವರು ಉದ್ಘಾಟಿಸಿದರು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭೆಯ ಸದಸ್ಯರೂ ಆಗಿರುವ ಡಾ. ಡಿ ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದು ಮಾತನಾಡಿ ಪ್ರತಿವರ್ಷ ಲಕ್ಷದೀಪೋತ್ಸವ ಸಂದರ್ಭದಲ್ಲಿ ವಸ್ತುಪ್ರದರ್ಶನ ಮಳಿಗೆಗೆ ಅವಕಾಶ ನಿಡಲಾಗುತ್ತಿದ್ದು ಕಳೆದ ಎರಡು ವರ್ಷಗಳಿಂದ ಕರೋನಾ ದಿಂದ ಅವಕಾಶ ಸಿಗಲಿಲ್ಲಿ.ಇದರಿಂದ ಜನರಿಗೆ ಈ ಭಾಗ್ಯ ಸಿಗಲಿಲ್ಲ.ಈ ಭಾರಿ ಮಾಹಿತಿ ,ತಂತ್ರಜ್ಞಾನದೊಂದಿಗೆ ಮನರಂಜನೆ ಸಿಗಲಿದೆ. ವಿಶೇಷವಾಗಿ ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವ್ರುದ್ದಿ ಯೋಜನೆಯ ಪ್ರಯೋಗ, ಪರಿವರ್ತನೆಗಳ ಮಾಹಿತಿಯನ್ನು ನೀಡಲಾಗುತ್ತದೆ. ಬ್ಯಾಂಕು, ಸಿರಿ ಮಳಿಗೆ,ರುಡ್ ಸೆಟ್ ಮಳಿಗೆ,ವಿವಿಧ ಇಲಾಖೆಗಳ ಮಳಿಗೆ ಸೇರಿ ಅನೇಕ ಮಳಿಗೆಗಳು ಇದ್ದು ಸಂಜೆ ಹೊತ್ತು ಮನರಂಜನೆಯನ್ನು ಸವಿಯಬಹುದು.ಕುಟುಂಬಿಕರಾಗಿ ಲಕ್ಷ ದೀಪೋತ್ಸವಕ್ಕೆ ಬಂದು ಸಂಭ್ರಮಿಸಿರಿ ಎಂದರು.

ಹೆಗ್ಗಡೆಯವರವ ಮೊಮ್ಮಗಳು ಮಾನ್ಯಾ, ಎಸ್‌ಡಿಎ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್ ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಏನ್ ಜನಾರ್ಧನ್, ವಸ್ತು ಪ್ರದರ್ಶನ ಮಳಿಗೆಯ ಮೇಲುಸ್ತುವಾರಿದಾರರಾದ ಯತೀಶ್ ಬಳಂಜ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಎಸ್‌ಡಿಎಂ ಆಸ್ಪತ್ರೆಯ ಆಡಳಿತಾಧಿಕಾರಿ ಜನಾರ್ದನ್, ಜನಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯಿಸ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್, ರಾಮಕೃಷ್ಣ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮ, ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿ ಪ್ರಶಾಂತ್, ರತ್ನರಾಜ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Gayathri SG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

7 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

24 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

52 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago