Categories: ಮಂಗಳೂರು

ಕಾರಿಂಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವರಿ ಸಚಿವ ಸುನಿಲ್ ಕುಮಾರ್

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಜಿಲ್ಲಾ ಉಸ್ತುವರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು.

ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದರು.

ಅಕ್ರಮ  ಕಲ್ಲುಗಣಿಗಾರಿಕೆಯಿಂದ ಸಾನಿಧ್ಯಕ್ಕೆ ಅಪಾಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಭಕ್ತರು ಮತ್ತು ಸಂಘಟನೆಯರ ಈ ಬಗ್ಗೆ ಸ್ಥಳೀಯ ಶಾಸಕ ಹಾಗೂ ನನ್ನ ಗಮನ ಕ್ಕೆ ತಂದಿದ್ದರು. ಈ ಹಿನ್ನೆಲೆ ಯಲ್ಲಿ ಈಗಾಗಲೇ ಸಾಕಷ್ಟು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದ್ದು, ಧಾರ್ಮಿಕ ಸೂಕ್ಮ ಪ್ರದೇಶ ಘೋಷಣೆ ಯ ನಿರ್ಧಾರ ಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.

ಕಾರಿಂಜ ಕ್ಷೇತ್ರವನ್ನು ಪಾವಿತ್ರ್ಯತೆಯ ಧಾರ್ಮಿಕ ಕೇಂದ್ರವಾಗಿಸುವುದರ ಜೊತೆಗೆ ಪ್ರವಾಸೋದ್ಯಮ ಇಲಾಖೆಯ ಮೂಲಕ ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಹಲವು ಬಾರಿ ಕಾರಿಂಜ ಕ್ಷೇತ್ರದಲ್ಲಿ ಗಣಿಗಾರಿಕೆಗೆ ಕಡಿವಾಣ ಸಹಿತ ಕ್ಷೇತ್ರದ ಅಭಿವೃದ್ಧಿ ನಿಟ್ಟಿನಲ್ಲಿ ತನ್ನ ಗಮನಕ್ಕೆ ತಂದಿದ್ದಾರೆ. ‌

ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇವೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಕಾರಿಂಜೇಶ್ವರ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಪ್ರಮುಖರಾದ ವೆಂಕಟರಮಣ ಮುಚ್ಚಿನ್ನಾಯ, ಅಜಿತ್ ಶೆಟ್ಟಿ, ಜಯಲಕ್ಷ್ಮೀ, ಸುದರ್ಶನ ಬಜ, ನರಸಿಂಹ ಮಾಣಿ, ರವಿ ಕೆಂಪುಗುಡ್ಡೆ, ಶರತ್ ಕುಮಾರ್, ರಮೇಶ್, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ, ಪುಷ್ಪರಾಜ ಚೌಟ,  ಮಾಧವ ಮಾವೆ,ಹರೀಶ್ ಪ್ರಭು, ರಾಮಕೃಷ್ಣ ಮಯ್ಯ, ಗಣೇಶ್ ಭಟ್, ಶುಭಕರ ಶೆಟ್ಟಿ, ಗಣಿ ಇಲಾಖೆಯ ಮಹದೇಶ್ವರ, ಗ್ರಾಮಕರಣಿಕೆ ಆಶಾ ಮೆಹಂದಲೆ, ಮೆಸ್ಕಾಂ ಇ.ಇ.ಪ್ರಶಾಂತ್ ಪೈ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

8 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

50 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

52 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago