News Karnataka Kannada
Tuesday, April 30 2024
ಮಂಗಳೂರು

ತಪ್ಪುಗ್ರಹಿಕೆಯಿಂದ ಗೊಂದಲಕ್ಕೆ ಒಳಗಾಗಬೇಡಿ: ಮೀನು ವ್ಯಾಪಾರ ಕುರಿತು ಮಾಜಿ ಮೇಯರ್‌ ಅಶ್ರಫ್‌ ಪ್ರಕಟಣೆ

Don't get confused by misunderstandings: Former Mayor Ashraf on fish trade
Photo Credit : News Kannada

ಮಂಗಳೂರು: ಮಂಗಳೂರು ಧಕ್ಕೆಯಲ್ಲಿ ಪ್ರತೀ ವರ್ಷದ ತನ್ನ ಮತ್ತು ಇತರ ಸಂಘದ ಸಭೆಯ ನಿರ್ಣಯದಂತೆ, ಹಸಿ ಮೀನು ವ್ಯಾಪಾರಸ್ಥರ ಸಂಘ, ಸದಸ್ಯರು ಅವರರವರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ ಹಬ್ಬ ದಿನಗಳಲ್ಲಿ ತಮ್ಮ ವ್ಯವಹಾರಕ್ಕೆ ಖಡ್ಡಾಯ ರಜೆ ಹೊಂದುವ ಪೂರ್ವ ನಿರ್ಧರಿತ ಪದ್ಧತಿಯಂತೆ ಈ ಬರುವ ತಾರೀಕು 28 ಸೆಪ್ಟೆಂಬರ್ 2023 ರಂದು ಮುಸ್ಲಿಮ್ ಭಾಂದವರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ಅವರು ಮತ್ತು ಇತರ ಧರ್ಮ ಭಾಂದವರು ಖಡ್ಡಾಯ ರಜೆ ಪಾಲಿಸುವ ಬಗ್ಗೆ ವಿವಿಧ ಸಂಘಗಳಲ್ಲಿ ನಿರ್ಣಯಿಸಿದಂತೆ ಪ್ರಕಟಣೆ ಫಲಕ ಅಳವಡಿಸಲಾಗಿರುತ್ತದೆ.

ಅದೇ ರೀತಿಯಲ್ಲಿ ವರ್ಷದ ಇತರ ದಿನಗಳಲ್ಲಿ ಇತರ ಹಬ್ಬಗಳಾದ ಬಾರ್ಕೂರು ಪೂಜೆ, ಉಚ್ಚಿಲ ಪೂಜೆ, ಗಣೇಶ ಚತುರ್ಥಿ, ಈದ್ ಉಲ್ ಫಿತರ್, ಬಕ್ರೀದ್, ಈದ್ ಮಿಲಾದ್, ಗುಡ್ ಫ್ರೈಡೇ ಮತ್ತು ಕ್ರಿಸ್ಮಸ್ ಎಂಬಿತ್ಯಾದಿ ಶುಭ ದಿನಗಳಲ್ಲಿ ಕೂಡಾ ಸಂಘಗಳ ನಿರ್ಣಯದಂತೆ ಮಾರಾಟಗಾರರು ಖಡ್ಡಾಯ ರಜೆ ಹೊಂದಿ ಆ ದಿನದ ಮಟ್ಟಿಗೆ ಮೀನುಗಾರಿಕಾ ಮಾರಾಟ ಚಟುವಟಿಕೆ ಸ್ಥಗಿತ ಗೊಳಿಸುವುದು ಅನೇಕ ವರ್ಷಗಳಿಂದ ನಡೆದು ಕೊಂಡು ಬಂದಿರುತ್ತದೆ.

ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕಾ ಚಟುವಟಿಕೆಯಲ್ಲಿ ಹಸಿ ಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘ, ಪರ್ಶಿಯನ್ ಬೋಟ್ ಯೂನಿಯನ್, ಟ್ರಾಲ್ ಬೋಟ್ ಯೂನಿಯನ್, ಫಿಶ್ ಬಯ್ಯರ್ಸ್ ಎಸೋಸಿಯೇಶನ್ ಮತ್ತಿತರ ಸಂಘಗಳು ಸಂಯುಕ್ತವಾಗಿ ಈ ರಜೆಗಳನ್ನು ನಿರ್ಧರಿಸಲಾಗಿದೆ.

ಆದರೆ ಇತ್ತೀಚೆಗೆ ಸಾಮಾಜಿಕ ಜಾಲ ತಾಣದಲ್ಲಿ ಸಂಘದ ಮೀಲಾದ್ ರಜೆಯ ಪ್ರಕಟನಾ ಫಲಕ ( ಫ್ಲೆಕ್ಸ್ ) ದ ಬಗ್ಗೆ ಕೆಲವರು ತಪ್ಪು ಗ್ರಹಿಕೆಯ ಪ್ರಚೋದನಾತ್ಮಕ ಮಾಹಿತಿ ಹಂಚುತ್ತಿರುವುದು ಖೇದಕರ. ಇಂತಹ ತಪ್ಪು ಮಾಹಿತಿ ಗಳಿಂದ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದಾಗಿ ವಿನಂತಿ ಎಂದು ಮಂಗಳೂರು ಧಕ್ಕೆ ಹಸಿಮೀನು ಮಾರಾಟಗಾರರ ಮತ್ತು ಕಮಿಷನ್ ಏಜೆಂಟರ ಸಂಘ ಅಧ್ಯಕ್ಷ,
ಮಾಜಿ ಮೇಯರ್‌ ಕೆ. ಅಶ್ರಫ್‌ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು