Categories: ಮಂಗಳೂರು

ತೆರೆಯ ಮರೆಯಲ್ಲಿ ನಿಂತು ಭಾಷಣ ತಿರುಚುವ ಕೆಲಸ ಮಾಡಬೇಡಿ: ಬಿಜೆಪಿಗೆ ಅಶೋಕ್ ರೈ ಚಾಲೆಂಜ್

ಬಂಟ್ವಾಳ : ನಾನು ರಾಜಕೀಯಕ್ಕೆ ಬಂದ ಮೇಲೆ ಯಾರನ್ನೂ ವೈಯುಕ್ತಿಕವಾಗಿ ದೂಷಿಸುವ ಕೆಲಸವನ್ನು ಮಾಡಿಲ್ಲ, ಈಗಲೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ನಾನು ರಾಜಕೀಯಕ್ಕೆ ಬಂದಿರುವುದು ಬಡವರ ಸೇವೆ ಮಾಡಲು ಕ್ಷೇತ್ರವನ್ನು ಅಭಿವೃದ್ದಿ ಮಡುವುದಕ್ಕೋಸ್ಕರವಾಗಿದ್ದು ನಾನು ಮಾಡಿದ ಭಾಷಣವನ್ನು ತಿರುಚುವ ಕೆಲಸವನ್ನು ಬಿಜೆಪಿಗರು ತೆರೆಮರೆಯಲ್ಲಿ ಮಾಡುತ್ತಿದ್ದು, ನೀವು ಆ ಕೆಲಸವನ್ನು ಬಿಟ್ಟು ನೀವು ಅಭಿವೃದ್ದಿ ಕೆಲಸ ಮಾಡಿದ್ದರೆ ಅದನ್ನು ಚರ್ಚಿಸುವ ಬನ್ನಿ ಎಂದು ಬಿಜೆಪಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಸವಾಲು ಹಾಕಿದ್ದಾರೆ.

ವಿಟ್ಲದ ಚಂದಳಿಕೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಪುತ್ತೂರಿನಲ್ಲಿ ಕಳೆದ ಐದು ವರ್ಷದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆದಿಲ್ಲ. ಕಳೆದ ಚುನಾವಣೆಯ ಸಮಯದಲ್ಲಿ ಬಿಜೆಪಿ ನೀಡಿದ ಆಶ್ವಾಸನೆ ಈಡೇರಿಸಿಲ್ಲ. ಪುತ್ತೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು ಮಾಡಿಲ್ಲ, ಪುತ್ತೂರಿನಲ್ಲಿ ರಿಂಗ್ ರೋಡ್ ಮಾಡುವುದಾಗಿ ಹೇಳಿದ್ದರು, ಬ್ರಹ್ಮನಗರದಲ್ಲಿ ಫ್ಲ್ಯಾಟ್ ನಿರ್ಮಿಸಿವುದಾಗಿ ಹೇಳಿದ್ದರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ರೂಪಿಸುವುದಾಗಿ ಹೇಳಿದ್ದರು, ವಿಟ್ಲದಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಮಾಡುವುದಾಗಿ ಹೇಳಿದ್ದರು, ಉಪ್ಪಿನಂಗಡಿಯಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡುವುದಾಗಿ ಮಾತುಕೊಟ್ಟಿದ್ದರು, ಮನೆ ಇಲ್ಲದ ಬಡವರಿಗೆ ಮನೆ ನಿರ್ಮಾಣ ಮಾಡುವುದಾಗಿ ಹೇಳಿದ್ದರು ಇದರಲ್ಲಿ ಯಾವುದನ್ನಾದರೂ ಮಾಡಿದ್ದಾರ? ಎಂದು ಪ್ರಶ್ನಿಸಿದ ಅಶೋಕ್ ರೈ ರಸ್ತೆಗೆ ಅಷ್ಟು ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಫ್ಲೆಕ್ಸ್ ಹಾಕಿಸಿ ಕಳಪೆ ಕಾಮಗಾರಿ ನಡೆಸಿ ಅದರ ಮೂಲಕ ೬೦ % ಕಮಿಷನ್ ಹೊಡೆದದ್ದನ್ನು ಬಿಟ್ಟರೆ ಏನೂ ಮಾಡಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ವರ್ಷಕ್ಕೆ ನೂರಾರು ಮನೆಗಳನ್ನು ಬಡವರಿಗೆ ನೀಡಲಾಗುತ್ತಿತ್ತು ಆದರೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮನೆ ನೀಡಿಲ್ಲ. ಶಾಲಾ ಮಕ್ಕಳ ಶೂ ಭಾಗ್ಯ, ಕ್ಷೀರ ಭಾಗ್ಯ, ಮೊಟ್ಟೆ ಭಾಗ್ಯ , ಇಂದಿರಾ ಕ್ಯಾಂಟೀನ್ ಎಲ್ಲವನ್ನೂ ಬಂದ್ ಮಡಿದ್ದೇ ಬಿಜೆಪಿ ಸರಕಾರದ ಸಾಧನೆಯಾಗಿದೆ. ಕಾಂಗ್ರೆಸ್ ಸರಕಾರ ಬಡವರಿಗೆ ನೆರವು ನೀಡುವ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದ್ದು ಅದೆಲ್ಲವನ್ನೂ ಬಿಜೆಪಿ ಕೈ ಬಿಟ್ಟು ಕೇವಲ ಭಾಷಣದಲ್ಲಿ ಮಾತ್ರ ಬಡವರ ಬಾಯಿಗೆ ಸಿಹಿ ಹಂಚುವ ಕೆಲಸವನ್ನು ಮಾಡಿದೆ ಎಂದು ಅಶೋಕ್ ರೈ ಹೇಳಿದರು.

ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಂ ಎಸ್ ಮಹಮ್ಮದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Sneha Gowda

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

1 hour ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

1 hour ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

1 hour ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

2 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

2 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

2 hours ago