News Karnataka Kannada
Sunday, April 28 2024
ಮಂಗಳೂರು

ಉಜಿರೆ ಎಸ್‌ ಡಿ ಎಂ ಕಾಲೇಜು ಪ್ರಾಂಶುಪಾಲರಾಗಿ ಡಾ.ಎ.ಜಯಕುಮಾರ ಶೆಟ್ಟಿ ನೇಮಕ

Dr A Jayakumar Shetty appointed principal of Ujire SDM College
Photo Credit : News Kannada

ಉಜಿರೆ: ಶ್ರೀ ಧ.ಮ. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಉಪಪ್ರಾಂಶುಪಾಲ ಡಾ.ಎ.ಜಯಕುಮಾರ ಶೆಟ್ಟಿ ಅವರು ನೇಮಕಗೊಂಡಿದ್ದಾರೆ.

ಡಾ.ಉದಯಚಂದ್ರ ಅವರ ಸೇವಾ ನಿವೃತ್ತಿಯಿಂದಾಗಿ ತೆರವಾದ ಪ್ರಾಂಶುಪಾಲರ ಹುದ್ದೆಗೆ ಡಾ.ಎ.ಜಯಕುಮಾರ ಶೆಟ್ಟಿ ನೇಮಕವಾಗಿದ್ದಾರೆ. ಕಳೆದ ೩೮ ವರ್ಷಗಳಿಂದ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ವಿಭಾಗದ ಮುಖ್ಯಸ್ಥರಾಗಿ, ಕಲಾ ನಿಕಾಯದ ಡೀನ್‌ ಆಗಿ ಹಾಗೂ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದು, ಈಗ ಪ್ರಾಚಾರ್ಯರಾಗಿ ಪದೋನ್ನತಿ ಹೊಂದಿದ್ದಾರೆ.

ಮಂಗಳೂರು ತಾಲೂಕಿನ ಅರ್ಕುಳ ಬೀಡು ಮನೆತನದವರಾದ ಡಾ.ಎ.ಜಯಕುಮಾರಶೆಟ್ಟಿ ಅವರು ತಮ್ಮ ಶಾಲಾ ಶಿಕ್ಷಣವನ್ನು ಅರ್ಕುಳ ಶ್ರೀರಾಮ ಶಾಲೆ, ಪದವಿ ಶಿಕ್ಷಣವನ್ನು ಮಂಗಳೂರು ವಿವಿ ಕಾಲೇಜಿನಲ್ಲಿ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ರ್ಯಾಂಕ್‌ ಮನ್ನಣೆಯೊಂದಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ಮಂಗಳೂರಿನ ಶ್ರೀ ಧ.ಮಂ ಆಡಳಿತ ಮಹಾವಿದ್ಯಾಲಯದಲ್ಲಿ ೧೯೮೫ರಲ್ಲಿ ಅಧ್ಯಾಪಕರಾಗಿ ಸೇವೆಗೆ ಸೇರಿ ನಂತರ ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ
ಪ್ರಾಧ್ಯಾಪಕರಾದರು.

ಕೈಗಾರಿಕಾ ಪ್ರೋತ್ಸಾಹಕಗಳ ಮೇಲಿನ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ, ಸಿಬ್ಬಂದಿ ನಿರ್ವಹಣೆಯಲ್ಲಿ ಭಾರತೀಯ ವಿದ್ಯಾಭವನದಿಂದ ಸ್ನಾತಕೋತ್ತರ ಡಿಪ್ಲೊಮಾ ಮತ್ತು ಎಂ.ಬಿ.ಎ ಪದವಿ ಪಡೆದಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ಹಾಗೂ ತುಮಕೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಅಧಿಕೃತ ಸಂಶೋಧನಾ ಮಾರ್ಗದರ್ಶಕರಾಗಿರುವ ಇವರ ಮಾರ್ಗದರ್ಶನದಲ್ಲಿ ೮ ಸಂಶೋಧನಾರ್ಥಿಗಳು ಪಿ.ಎಚ್.ಡಿ. ಪದವಿ ಪಡೆದಿದ್ದು, ಪ್ರಸ್ತುತ ನಾಲ್ಕು ವಿದ್ಯಾರ್ಥಿಗಳು ಸಂಶೋಧನಾನಿರತರಾಗಿದ್ದಾರೆ.

ಯು.ಜಿ.ಸಿ ಪ್ರಾಯೋಜಿತ ಮೂರು ಸಂಶೋಧನಾ ಪ್ರಾಜೆಕ್ಟ್‌ಗಳನ್ನು ಪೂರೈಸಿರುವ ಇವರ ೫೦ಕ್ಕೂ ಅಧಿಕ ಸಂಶೋಧನಾ ಲೇಖನಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.

ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕಮ್ಮಟಗಳಲ್ಲಿ ೫೦ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಆರ್ಥಿಕ ಅಭಿವೃದ್ಧಿ, ಹಕ್ಕುಗಳ ಪರಿಭಾಷೆಯಲ್ಲಿ ಅಭಿವೃದ್ಧಿ, ಒಳಗೊಳ್ಳುವ ಅಭಿವೃದ್ಧಿ, ಅಂತರರಾಷ್ಟ್ರೀಯ ವ್ಯಾಪಾರ ಹಾಗೂ ಸಿರಿ ಮತ್ತಿತರ ೧೦ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣಾಭಿವೃದ್ಧಿ ಅಧ್ಯಯನ ಮಂಡಳಿಯ ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿ ಅತ್ಯುತ್ತಮ ಯೋಜನಾಧಿಕಾರಿಯಾಗಿ ರಾಜ್ಯಪ್ರಶಸ್ತಿಯನ್ನು ಪಡೆದಿದ್ದಾರೆ. ರೋಟರಿ ಕ್ಲಬ್‌ ಅಧ್ಯಕ್ಷರಾಗಿ ಅತ್ಯುತ್ತಮ ಸಮಾಜ ಸೇವೆಗಾಗಿ ಜಿಲ್ಲಾ ಅತ್ಯುತ್ತಮ ಅಧ್ಯಕ್ಷರಾಗಿ ಗೌರವಿಸಲ್ಪಟ್ಟಿದ್ದಾರೆ. ಸಮಕಾಲೀನ ಆರ್ಥಿಕ ವಿಷಯಗಳ ಬಗ್ಗೆ ಪತ್ರಿಕೆಗಳಲ್ಲಿ ಇವರ ಅಂಕಣಗಳು ಪ್ರಕಟವಾಗುತ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು