News Karnataka Kannada
Friday, May 03 2024
ಮಂಗಳೂರು

ಡ್ರಗ್‌ ಫ್ರೀ ಮಂಗಳೂರು ಕ್ಯಾಂಪೇನ್‌: ಮೂವರು ಆರೋಪಿಗಳು ಅಂದರ್‌

Drug-free Mangaluru campaign: Three accused in Andar
Photo Credit : News Kannada

ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ (Methylene dioxy methamphetamine) MDMA ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ದಸ್ತಗಿರಿ ಮಾಡಿದ್ದಾರೆ.

ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಮಾರುತಿ ಸ್ವಿಪ್ಟ್ ಕಾರಿನಲ್ಲಿ ಮೂವರು ಮಾದಕ ವಸ್ತುವಾದ MDMA ಅನ್ನು ಬೆಂಗಳೂರಿನಿಂದ ಖರೀದಿಸಿಕೊಂಡು  ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಉಳ್ಳಾಲ ಹಳೆಕೋಟೆಯ ಮೊಹಮ್ಮದ್‌ ಹಫೀಝ್‌ (35), ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ನಂದಾವರ ಮನೆಯ ಅಮೀರ್‌(34), ಪಾಣೆಮಂಗಳೂರು ದಾಸರಗುಡ್ಡೆಯ ಜಾಕೀರ್‌ ಹುಸೇನ್‌ (28) ಅವರನ್ನು ಬಂಧಿಸಲಾಗಿದೆ.

ಬಂಧಿತರಿಂದ 200 ಗ್ರಾಂ ತೂಕದ ರೂ. 10,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು-1, 70,000 ರೂ. ಮೌಲ್ಯದ 3 ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 5,70,500 ರೂ ಆಗಬಹುದು. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಮೊಹಮ್ಮದ್ ಹಫೀಸ್ ಎಂಬಾತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ ಹಾಗೂ ಇತರ 3 ದರೋಡೆ ಪ್ರಕರಣಗಳು, ಬಜ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ, ಮಂಗಳೂರು ದಕ್ಷಿಣ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಶಿರ್ವಾ ಹಾಗೂ ಪಡುಬಿದ್ರಿ ಠಾಣೆಯಲ್ಲಿ ಕಳವು ಪ್ರಕರಣ, ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಜಾರಿಯಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ಹಫೀಸ್ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಪ್ರಕರಣ, ಬಂಟ್ವಾಳ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.

ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು