Categories: ಮಂಗಳೂರು

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ : 6.ಕೆಜಿ ಗಾಂಜಾ ವಶ

ಮಂಗಳೂರು: ಕದ್ದು ಮುಚ್ಚಿ ಗಾಂಜ ಮಾರಟಾ ಮಾಡುತಿದ್ದ ಆರೋಪಿ ಇದೀಗ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ ಬಂಧಿತ ಆರೋಪಿ. ಈತನಿಂದ 1.50 ಲಕ್ಷ ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಈತ ವಿಶಾಖ ಪಟ್ಟಣದಿಂದ ಗಾಂಜಾ ಖರೀದಿಸಿ ಸಣ್ಣ ಪುಟ್ಟ ಪ್ಯಾಕೆಟ್‌ ಮಾಡಿ ನಂತರ ಅದನ್ನು ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ.ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಒಳಪೇಟೆಯಲ್ಲಿ ಗೂಡ್ಸ್ ಟೆಂಪೋದಲ್ಲಿ ಗಾಂಜಾ ಸಾಗಿಸುವಾಗ ಸಿಸಿಬಿ ಬಲೆಗೆ ಬಿದ್ದಿದ್ದಾನೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 9.11 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಸಂಬಂಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಈಗಾಗಲೇ ಹಲ್ಲೆ, ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳಿರುವುದು ಪತ್ತೆಯಾಗಿದೆ.

Nisarga K

Recent Posts

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

13 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

16 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

37 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

50 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

1 hour ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 hour ago