Categories: ಮಂಗಳೂರು

ಬೆಳ್ತಂಗಡಿ: ಭಾರಿ ಮಳೆಯಿಂದಾಗಿ ತಾಲೂಕಿನ ಕಿಂಡಿ ಅಣೆಕಟ್ಟುಗಳಲ್ಲಿ ತುಂಬಿದ ತ್ಯಾಜ್ಯ

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ನದಿ ನೀರಿನ ಮಟ್ಟ ಹೆಚ್ಚಾಗಿರುವ ನಡುವೆ ಕಿಂಡಿ ಅಣೆಕಟ್ಟುಗಳಲ್ಲಿ ಮರಮಟ್ಟುಗಳ ತ್ಯಾಜ್ಯ ತುಂಬಿವೆ.

ತಾಲೂಕಿನ ನೇತ್ರಾವತಿ, ಮೃತ್ಯುಂಜಯ, ಫಲ್ಗುಣಿ, ಸೋಮಾವತಿ ನದಿ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಕಾಪು, ಕಡಂಬಳ್ಳಿ, ಕಲ್ಮಂಜ, ಪಜಿರಡ್ಕ, ನಿಡಿಗಲ್ ಸಹಿತ ಇತ್ತೀಚೆಗೆ ನಿರ್ಮಿಸಿದ ಕಿಂಡಿ ಅಣೆಕಟ್ಟುಗಳಲ್ಲಿ ತ್ಯಾಜ್ಯ ತುಂಬಿದೆ.

ಗುರುವಾರ ರಾತ್ರಿ ಪೂರ್ತಿ ಮಳೆ ಭಾರಿ ಮಳೆಯಾದ ಪರಿಣಾಮ ಉಜಿರೆ ಗಣೇಶ್ ಕಲಾ ಮಂದಿರ ಸಮೀಪ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಯಾರೂ ವಾಸ್ತವ್ಯ ಇಲ್ಲದ ಹಂಚಿನ ಹಳೇ ಮನೆಯೊಂದು ಧರಾಶಾಯಿಯಾಗಿದೆ. ಕೆಲವೆಡೆ ಅಡಿಕೆ ಸಸಿಗಳು ಗಾಳಿ ಮಳೆಗೆ ತುಂಡರಿಸಿ ಬಿದ್ದಿವೆ. ಗುರುವಾರ ಭಾರಿ ಮಳೆಯಿಂದಾಗಿ ತಾಲೂಕಿನ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಯಿತು. ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಅಲ್ಲಲ್ಲಿ ಹೊಂಡ ಗುಂಡಿಯಾಗಿವೆ.

Gayathri SG

Recent Posts

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

17 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

31 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

42 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

53 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

2 hours ago