Categories: ಮಂಗಳೂರು

ಮತದಾನ ಜಾಗೃತಿ: ಮಾಣಿಯ 4ನೇ ತರಗತಿ ವಿದ್ಯಾರ್ಥಿನಿಗೆ ಚುನಾವಣಾ ಆಯೋಗದಿಂದ ಮೆಚ್ಚುಗೆ

ಮಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿ ಮೂಡಿಸಿ ಗಮನ ಸೆಳೆದಿರುವ ದಕ್ಷಿಣ ಕನ್ನಡದ ಮಾಣಿಯ 4ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗೆ ಕೇಂದ್ರ ಚುನಾವಣಾ ಆಯೋಗವು ಮೆಚ್ಚುಗೆ ವ್ಯಕ್ತಪಡಿಸಿದೆ.

ಹೌದು. . ಈಕೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೇ.100 ಮತದಾನದ ಅರಿವು ಮೂಡಿಸುವ ಆಕೆಯ ಅತ್ಯುತ್ತಮ ಉದ್ದೇಶಕ್ಕೆ ಮೆಚ್ಚುಗೆ ಸೂಚಿಸಿದೆ. ಬಂಟ್ವಾಳ ತಾ| ಬಾಳಿಲ ಗ್ರಾಮದ ಕಶೆಕೋಡಿ ನಿವಾಸಿಯಾಗಿರುವ ಸನ್ನಿಧಿ ಮಾಣಿ ಪೆರಾಜೆ ಬಾಲವಿಕಾಸ ಇಂಗ್ಲಿಷ್ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ.

ಈಕೆ ಕಳೆದ ಚುನಾವಣೆಯ ಸಂದರ್ಭದಲ್ಲಿ ತಾನು ಮಾಡಿದ ಮತದಾನ ಜಾಗೃತಿಯ ದಾಖಲೆಗಳನ್ನು ಇಮೇಲ್‌ ಮೂಲಕ ಚುನಾವಣಾ ಆಯೋಗಕ್ಕೆ ಕಳುಹಿಸಿ ಅದಕ್ಕಾಗಿ ಸಹಕಾರ ಕೋರಿದ್ದರು. ತನ್ನ ಸಹಪಾಠಿಗಳೊಂದಿಗೆ ಮನೆ, ಅಂಗಡಿಗಳು, ಸಾರ್ವಜನಿಕ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕಾರ್ಯದಲ್ಲಿ ತೊಡಗಿದ್ದರು. ಮತದಾನ ಮಾಡುವ ಜತೆಗೆ ಪಕ್ಷಾತೀತವಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಪ್ರೇರಣೆ ನೀಡಿದ್ದಳು.

ದ.ಕ ದ ಡಿಸಿ ಕೂಡ ಈಕೆಯ ಕಾರ್ಯವನ್ನು ಗುರುತಿಸಿ ಪ್ರಶಂಸಿಸಿದ್ದರು. ಸನ್ನಿಧಿಯ ಪತ್ರಕ್ಕೆ ಇದೀಗ ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಬಂದಿದೆ. “ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವುದಕ್ಕೆ ಧನ್ಯವಾದಗಳು. ಆಯೋಗವು ನಿಮ್ಮ ಮೌಲಿಕ ಅಭಿಪ್ರಾಯಗಳನ್ನು ಗುರುತಿಸಿದೆ. ಉತ್ತಮ ಚುನಾವಣಾ ಪ್ರಕ್ರಿಯೆ ನಡೆಸಲು ಪೂರಕವಾಗಿ ನಿಮ್ಮ ಅಭಿಪ್ರಾಯ, ಕಾರ್ಯಗಳನ್ನು ಪ್ರಶಂಸಿಸುತ್ತೇವೆ” ಎಂದು ಪ್ರತಿಕ್ರಿಯೆಯಲ್ಲಿ ತಿಳಿಸಿದೆ.

 

Ashitha S

Recent Posts

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

13 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

28 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

36 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

51 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

51 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

1 hour ago