News Karnataka Kannada
Saturday, April 20 2024
Cricket
ಮಂಗಳೂರು

ಪಿ.ಎ.ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

Felicitation programme at P.A. Engineering College
Photo Credit : News Kannada

ಮಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ 2023ರ ವಾರ್ಷಿಕ ಪರೀಕ್ಷೆಯಲ್ಲಿ ಬಯೋಟೆಕ್ನಾಲಜಿ ವಿಭಾಗದಲ್ಲಿ 5ನೇ ಹಾಗೂ 6ನೇ ರ್ಯಾಂಕ್ ಗಳಿಸಿದ ಫೀನಾ ಹಕೀಮ್ ಮತ್ತು ಹರ್ಷಿತ ಶೆಟ್ಟಿಗಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ ವಿದ್ಯಾರ್ಥಿಗಳು ಉದ್ಯೋಗಾವಕಾಶವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ಸಂಸ್ಥೆಯೆಲ್ಲ ವಿದ್ಯಾರ್ಥಿಗಳು ಮುಂದೆ ತಮ್ಮ ತಮ್ಮ ವಿಭಾಗದಲ್ಲಿ ಅತ್ಯಧಿಕ ರಾಂಕ್ ಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಹೆಸರನ್ನು ತರಬೇಕೆಂದು ಕಿವಿಮಾತನ್ನು ಹೇಳಿದರು.

ಪಿ. ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫಾಝ್ ಹಾಸಿಮ್ ಜೆ .ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿ ಯಜ್ನೀಶ್ ಮಾತನಾಡಿ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದರು. ಈ ಕಾರ್ಯಕ್ರಮದಲ್ಲಿ ಕುಮಾರಿ ಫೀನಾ ಹಕೀಮ್ ಮತ್ತು ಕುಮಾರಿ ಹರ್ಷಿತ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು. ಹಾಗೂ ಕಾಲೇಜಿನ ಪೇಸ್ ನ್ಯೂಸ್ ಬುಲೇಟಿನ್ 2023 ಸಂಚಿಕೆ 3 ನ್ನು ಬಿಡುಗಡೆಗೊಳಿಸಲಾಯಿತು .

ಪಿ.ಎ. ವಿದ್ಯಾಸಂಸ್ಥೆಯ ಎ.ಜಿ.ಯಂ. ಸರ್ಫುದ್ದೀನ್ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಡಾ. ಶರ್ಮಿಳಾ ಕುಮಾರಿ ಸ್ವಾಗತಿಸಿದರು. ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಕೃಷ್ಣ ಪ್ರಸಾದ್ ರವರು ಧನ್ಯವಾದ ಗೈದರು.

ಎಂ.ಬಿ.ಎ ವಿಭಾಗದ ನಿರ್ದೇಶಕ ಹಾಗೂ ಡೀನ್, (ವಿದ್ಯಾರ್ಥಿ ಕಲ್ಯಾಣ ಅಧಿಕಾರಿ) ಡಾ. ಸಯ್ಯದ್ ಅಮೀನ್, ಪಿ.ಎ. ಟ್ರಸ್ಟ್ ನ ವಿವಿಧ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ, ಡಾ. ಸರ್ಫಾಝ್ ಹಾಸಿಮ್ ಜೆ, ಫ್ರೋ. ಸೂಫಿ, ಡಾ. ಸಲೀಮುಲ್ಲಾ ಖಾನ್, ಡಾ. ಸಜೀಸ್ ರಘುನಾಥನ್ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು, ಕಾಲೇಜಿನ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ. ಇಸ್ಮಾಯಿಲ್ ಶಾಫಿ, ಬಯೋಟೆಕ್ನಾಲಜಿ ವಿಭಾದ ಡಾ. ರೊನಾಲ್ಡ್ ವಾಲ್ಡರ್ ಹಾಗೂ ದೈಹಿಕ ಶಿಕ್ಷಣ ನಿರ್ಧೇಶಕರಾದ ಡಾ. ಇಕ್ಬಾಲ್ ರವರು ಕಾರ್ಯಕ್ರಮವನ್ನು ಆಯೋಜಿಸಿದರು. ಕುಮಾರಿ ಬುಶೈರಾ ಕಾರ್ಯಕ್ರಮವನ್ನು ನಿರೂಪಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು