News Karnataka Kannada
Monday, April 29 2024
ಮಂಗಳೂರು

ಹರೀಶ್ ಪೂಂಜಾ ವಿರುದ್ದ ಎಫ್ಐಆರ್: ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಹಂಚಿಕೊಂಡ ಶಾಸಕ

FIR against Harish Poonja: MLA shares post on Facebook
Photo Credit : Facebook

ಪುತ್ತೂರು: ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದನ್ನು ತೆರವುಗೊಳಿಸಲು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾದಾಗ ಕರ್ತವ್ಯನಿರತ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಶಾಸಕ ಹರೀಶ್‌ ಪೂಂಜ ಅವರು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಹೀಗಾಗಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ ಐ ಆರ್‌ ಒಂದು ದಾಖಲಾಗಿದೆ. ಈ ಕುರಿತಾಗಿ ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಹರೀಶ್‌ ಪೂಂಜಾ ಅವರು,

‘ನೋಡೇ ಬಿಡೋಣ, ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ದ. ‘ಬಾಲ್ಯದಿಂದಲೂ ಸುಭಾಷ್ ಚಂದ್ರ ಬೋಸ್ , ಸರ್ದಾರ್ ಪಟೇಲ್, ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರನ್ನು ಆದರ್ಶವಾಗಿ ಇಟ್ಟುಕೊಂಡಿದ್ದೇನೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ABVP) ದಿನಗಳಿಂದ ಜನ ಸೇವೆ, ಜನರಿಗಾಗಿ ಸಂಘರ್ಷ ಮಾಡಿಕೊಂಡು ನಾಯಕನಾದವನು.

ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ದ. ನನ್ನ ವಿಧಾನಸಭಾ ಕ್ಷೇತ್ರದಲ್ಲಿ, ಅರಣ್ಯದ ಅಂಚಿನಲ್ಲಿ, ನೂರು ವರ್ಷಕ್ಕಿಂತಲೂ ಹಿಂದಿನಿಂದ ಕೃಷಿ ಚಟುವಟಿಕೆ ಮಾಡುತ್ತಾ ಬಂದಿದ್ದ ಕಳೆಂಜದ ಶ್ರೀ ದೇವಣ್ಣ ಗೌಡ ಅವರ ಕುಟುಂಬವನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಶಾಸಕ ಮಿತ್ರರೊಂದಿಗೆ ಮತ್ತು ಕಾರ್ಯಕರ್ತ ರೊಂದಿಗೆ ಸೇರಿ ಪ್ರತಿಭಟಿಸಿ ಬಡ ಕುಟುಂಬವನ್ನು ಒಕ್ಕಲೆಬ್ಬಿಸುವುದರಿಂದ ತಡೆದಿದ್ದೇವು.

ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮನೆಯವರ ಪರವಾಗಿ ನಾನೊಬ್ಬ ಜನಪ್ರತಿನಿಧಿಯಾಗಿ ಧ್ವನಿ ಎತ್ತಿದ್ದು ತಪ್ಪಾಯಿತೇ?. ನನ್ನ ಕ್ಷೇತ್ರದ ಜನರ ಪರವಾಗಿ ಹೋರಾಡುವ ಹಕ್ಕು ನನಗಿಲ್ಲವೇ?. ನನ್ನ ಜನ ನನ್ನಲ್ಲಿ ಸಮಸ್ಯೆ ಹೇಳಿಕೊಂಡಾಗ ಸುಮ್ಮನಿರಬೇಕೆ?. ಹೀಗಾದರೆ ಸಾಮಾನ್ಯ ಜನರ ಗತಿಯೇನು? ಜನರ ಸಮಸ್ಯೆಗೆ ಧ್ವನಿಯಾದ ಒಬ್ಬ ಜನಪ್ರತಿನಿಧಿಯನ್ನು ಹೀಗೆಲ್ಲ ಕಾಡುವುದಾದರೆ ಜನಸಾಮಾನ್ಯರು ಕಾಂಗ್ರೆಸ್‌ ಸರ್ಕಾರದಡಿಯಲ್ಲಿ ಹೇಗೆ ಬದುಕಬೇಕು? . ಮಾನ್ಯ ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು