News Karnataka Kannada
Saturday, May 18 2024
ಮಂಗಳೂರು

ಬಂಟ್ವಾಳ ಪ್ರಿಯಾ ಎಲೆಕ್ಟ್ರಾನಿಕ್ಸ್ ಶೋ ರೂಂನಲ್ಲಿ ಬೆಂಕಿ

fire-breaks-out-at-priya-electronics-showroom-in-bantwal
Photo Credit : News Kannada

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.

ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ ಸಂಶಯ ವ್ಯಕ್ತವಾಗಿದೆ.

ಸಾರ್ವಜನಿಕರು ಬೆಂಕಿಯನ್ನು ನೋಡಿ ಅಗ್ನಿಶಾಮಕ ದಳದ ವರಿಗೆ ಸಂಪರ್ಕ ಮಾಡಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಸಹಿತ ಸಿಬ್ಬಂದಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಾರ್ವಜನಿಕ ರು ಕೈ ಜೋಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು