ಮಂಗಳೂರು

ಮಂಗಳೂರು| ಪ್ರಥಮ ಚಿಕಿತ್ಸೆ ಯ ಕೌಶಲ್ಯದಿಂದ ಅಮೂಲ್ಯ ಜೀವ ರಕ್ಷಣೆ ಸಾಧ್ಯ -ಡಾ.ಸತೀಶ್ ಕುಮಾರ್ ಭಂಡಾರಿ

ಮಂಗಳೂರು, ಜು.6; ನಮ್ಮ ಜೀವದ ರಕ್ಷಣೆ,ಇತರರ ಅಮೂಲ್ಯ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ಕೌಶಲ್ಯದ ಅರಿವು ಅಗತ್ಯ ಎಂದು  ನಿಟ್ಟೆ (ಪರಿಗಣಿತ )ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ನಿಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ,ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿಂದು ಹಮ್ಮಿಕೊಂಡ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇಂದಿಗೂ ಪ್ರತಿ ವರ್ಷ ನಮ್ಮ ದೇಶದ ದಲ್ಲಿ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಸೇರಿಸುವ ಮೊದಲೇ ಸಾವಿರಾರು ರೋಗಿಗಳು ಸಾವನ್ನ ಪ್ಪುತ್ತಿರುವ ಘಟನೆಗಳು ನಡೆಯುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ದೊರೆತರೆ ಸಾಕಷ್ಟು ಅಮೂಲ್ಯ ಜೀವಗಳನ್ನು ಉಳಿಸಬಹುದು.ಅದಕ್ಕಾಗಿ ಸಮಾಜದ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿರು ವವರಿಗೆ  ಪ್ರಥಮ ಚಿಕಿತ್ಸೆ ಯ ಮಾಹಿತಿ ಕೌಶಲ್ಯ ವನ್ನು ನೀಡುವ ಕೆಲಸ ಕ್ಷೇಮದ  ಮೂಲಕ ನಡೆಯುತ್ತಿದೆ ಎಂದು ಡಾ.ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.

ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ.(ಅರಿವಳಿಕೆ ಶಾಸ್ತ್ರ ಮತ್ತು ತುರ್ತು ನಿಗಾ ವಿಭಾಗ)ದ ಪ್ರೊಫೆಸರ್ ಡಾ.ಗಾಯತ್ರಿ ಭಟ್  ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭದ  ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೊಪಿಸಿದರು. ಉಪಾಧ್ಯಕ್ಷ ಅನ್ಸಾರ್ ಇನೋಳಿ ಕಾರ್ಯಕ್ರಮ ಸಂಯೋಜಿಸಿದರು.

ಪ್ರಥಮ ಚಿಕಿತ್ಸಾ ತರಬೇತಿ ಶಿಬಿರದಲ್ಲಿ ತರಬೇತುದಾರಾದ ಡಾ.ಗಾಯತ್ರಿ ಭಟ್ ನೇತೃತ್ವದ ವೈದ್ಯರ ತಂಡ ದ ಸದಸ್ಯ ರಾದ
ಡಾ.ವೈದೇಹಿ ಭೃಗು,ಡಾ.ವರದಾ ಕಂಜಲ್ಕರ್. ಡಾ.ವೈಭವ್ ಯಾದವ್, ಡಾ.ವೀಣಾ ಮಾಧವನ್  ಪ್ರಾತ್ಯಕ್ಷಿಕೆ ಯೊಂದಿಗೆ ತರಬೇತಿ ನೀಡಿದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago