Categories: ಮಂಗಳೂರು

ಮೀನು ಕೃಷಿಕರ ದಿನಾಚರಣೆ: ಪಣಪಿಲದಲ್ಲಿ ಮತ್ಸ್ಯ ಮಿಲನ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ: ಪಣಪಿಲ ಕೊಟ್ಟರಿಬೆಟ್ಟು ರಾಜ್ ಫಿಶ್ ಫಾರ್ಮಿಂಗ್‌ನಲ್ಲಿ `ಮತ್ಸ್ಯ ಮಿಲನ’ ಮೀನು ಸಾಕಾಣಿಕೆ ಮಾಹಿತಿ ಕಾರ್ಯಾಗಾರ ಹಾಗೂ ಮೀನು ಹಿಡಿಯುವ ಕಾರ್ಯಕ್ರಮ ಸೋಮವಾರ ನಡೆಯಿತು.

ಮಂಗಳೂರು ಕೆ.ವಿ.ಕೆ ಮೀನುಗಾರಿಕೆ ವಿಭಾಗದ ವಿಜ್ಞಾನಿ ಡಾ.ರವೀಂದ್ರ ಗೌಡ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮೀನುಗಾರಿಕೆ ಲಾಭದಾಯಕ ಕೃಷಿಯಾಗಿದೆ. ದ.ಕ ಜಿಲ್ಲೆಯಲ್ಲಿ ಒಳಗಾಡು ಮೀನುಗಾರಿಕೆ ಮತ್ತು ಮೀನುಪಾಲನೆಗೆ ಹೆಚ್ಚಿನ ಬೇಡಿಕೆ ಇದೆ. ಕೃಷಿ ಹೊಂಡದಲ್ಲೂ ವಿವಿಧ ರೀತಿಯ ಮೀನಿನ ಮರಿಗಳನ್ನು ಸಾಕುವುದರಿಂದ ಪರ್ಯಾಯ ರೀತಿಯಲ್ಲಿ ಆದಾಯಗಳಿಸಬಹುದು ನೀರಾವರಿಗೂ ಆದ್ಯತೆ ನೀಡಿದಂತಾಗಿದೆ ಎಂದರು.

ಮಂಗಳೂರು ಕೆವಿಕೆಯ ಹಿರಿಯ ವಿಜ್ಞಾನಿ ಡಾ.ರಮೇಶ್ ಅಧ್ಯಕ್ಷತೆಯನ್ನು ವಹಿಸಿದರು. ಕರಾವಳಿಗರು ಮೀನು ಪ್ರಿಯರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೀನುಗಳ ಸಂಖ್ಯೆ ಕಡಿಮೆಯಾಗಿದೆ ಮೀನು ತಿನ್ನುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಮೀನು ಸಾಕಾಣಿಕೆ ಅನಿವಾರ್ಯ. ಮೀನು ಕೃಷಿಕರಿಗಾಗಿ ಇಲಾಖೆಯು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ ಮತ್ತು ಮೀನು ಕೃಷಿಯಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಮತ್ತು ಆದಾಯ ದ್ವಿಗುಣ ಮಾಡುವ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ನೀಡಲಾಗುತ್ತಿದೆ ಎಂದರು.

ದರೆಗುಡ್ಡೆ ಗ್ರಾಪಂ ಸದಸ್ಯ ಮುನಿರಾಜ ಹೆಗ್ಡೆ, ದರೆಗುಡ್ಡೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ವಿನೋಧರ ಪೂಜಾರಿ, ಪ್ರಗತಿಪರ ಕೃಷಿಕ, ಶಿರ್ತಾಡಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ್ ಸುವರ್ಣ ಅತಿಥಿಗಳಾಗಿ ಭಾಗವಹಿಸಿದ್ದರು. ಕೊಟ್ಟಾರಿಬೆಟ್ಟು ಮನೆಯ ಯಜಮಾನ ದೇವರಾಜ ಕೋಟ್ಯಾನ್ ಉಪಸ್ಥಿತರಿದ್ದರು. ರಾಜೇಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನಂತರ ಬಲೆ ಹಾಕಿ ಮೀನುಗಳನ್ನು ಹಿಡಿದು ಮಾರಾಟ ಮಾಡಲಾಯಿತು.

ಮೀನು ಕೃಷಿಕರ ದಿನದ ಅಂಗವಾಗಿ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಬೀದರ್, ಭಾ.ಕೃ.ಸಂ.ಪ. ಕೃಷಿ ವಿಜ್ಞಾನ ಕೇಂದ್ರ ದ.ಕ.ಮಂಗಳೂರು ಮತ್ತು ಮೀನುಗಾರಿಕೆ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಇವುಗಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಯಿತು.

Gayathri SG

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

11 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

24 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

44 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

52 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

58 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago