News Karnataka Kannada
Friday, April 19 2024
Cricket
ಮಂಗಳೂರು

ಮಂಗಳೂರು: ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿಸಿದ್ದ ಯುವಕರ ತಂಡ ಸೆರೆ

ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ.
Photo Credit : News Kannada

ಮಂಗಳೂರು: ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ.

ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್​ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಬಂಧಿತ ಆರೋಪಿಯಾಗಿದ್ದು, ಪ್ರಕರಣದಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೂ ಸಿಲುಕಿದ್ದಾನೆ.

ಆರೋಪಿ ಅಕ್ಬರ್​ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್​ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು